ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಖೋ-ಖೋ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳೆ ಹಾಗೂ ಪುರುಷರ ತಂಡ ನೇಪಾಳ ವಿರುದ್ಧ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿವೆ.
ಇಂದು ಮೊದಲು ನಡೆದ ಮಹಿಳೆಯರ ಫೈನಲ್ ಪಂದ್ಯದಲ್ಲಿ ನೇಪಾಳ ಮಹಿಳಾ ತಂಡವನ್ನು ಸೋಲಿಸುವ ಮೂಲಕ ಟ್ರೋಫಿ ಎತ್ತಿ ಹಿಡಿದಿತ್ತು. ನಂತರ ನಡೆದ ಪುರುಷರ ಫೈನಲ್ ಪಂದ್ಯದಲ್ಲಿ ಭಾರತ ಗೆಲುವ ಸಾಧಿಸುವ ಮೂಲಕ ಟ್ರೋಫಿ ಎತ್ತಿ ಹಿಡಿದಿದೆ.
ಪುರುಷರ ವಿಭಾಗದ ಫೈನಲ್‌ನಲ್ಲಿ ಟಾಸ್ ಗೆದ್ದ ನೇಪಾಳ ತಂಡ ರಕ್ಷಣೆ ಆಯ್ಕೆ ಮಾಡಿಕೊಂಡಿತು. ಮೊದಲು ಸ್ಟ್ರೈಕ್ ಮಾಡಿದ ಭಾರತ ಮೊದಲನೇ ಟರ್ನ್‌ನಲ್ಲಿ 26-0 ಅಂಕಗಳ ಮುನ್ನಡೆ ಗಳಿಸಿದರು.
ಡಿಫೆಂಡರ್‌ಗಳ ತೀವ್ರ ಪ್ರತಿರೋಧದ ಬಲದಿಂದ ಭಾರತ ತಂಡ ಎರಡನೇ ಟರ್ನ್‌ನ ಕೊನೆಯಲ್ಲಿ 26-18 ಅಂಕಗಳಿಸಿತು. ಇದರಿಂದ ಈ ಟರ್ನ್‌ನಲ್ಲಿ ಭಾರತ 8 ಅಂಕಗಳ ಮುನ್ನಡೆ ಸಾಧಿಸಿತು.
ಇದಾದ ನಂತರ 3 ನೇ ಟರ್ನ್‌ನಲ್ಲಿ ಭಾರತ 54 ಅಂಕಗಳನ್ನು ಗಳಿಸಿದರೆ, ನೇಪಾಳ ತಂಡ 18 ಅಂಕಗಳನ್ನು ಗಳಿಸಿ 36 ಅಂಕಗಳ ಹಿನ್ನಡೆ ಅನುಭವಿಸಿತು. ಅಂತಿಮವಾಗಿ ಭಾರತ ತಂಡವು ಏಕಪಕ್ಷೀಯವಾಗಿ ಪಂದ್ಯದಲ್ಲಿ ಗೆಲುವ ಸಾಧಿಸುವ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…