ಕ್ರೀಡೆ

ಟಿ-20 ಅಂತಾರಾಷ್ಟ್ರೀಯ ಪಂದ್ಯಗಳ ಸಾಮ್ರಾಟ ಕಿಂಗ್‌ ಕೊಹ್ಲಿ

ನಾಲ್ಕು ಸಾವಿರ ರನ್‌ ಗಳ ಗಡಿ ದಾಟಿದ ವಿಶ್ವದ ಮೊದಲ ಆಟಗಾರ

ಅಡಿಲೇಡ್‌: ಆಸ್ಟ್ರೇಲಿಯಾ ನೆಲದಲ್ಲಿ ನಡೆಯುತ್ತಿರುವ 2022ರ ಟಿ-20 ವಿಶ್ವಕಪ್ ಪಂದ್ಯದಲ್ಲಿ ಆಡುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4,000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಡಿಲೇಡ್ ನ ಓವಲ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ತಮ್ಮ ನೆಚ್ಚಿನ ಅಡಿಲೇಡ್‌ ಪಂದ್ಯದಲ್ಲಿ ಮತ್ತೆ ಮಿಂಚಿದ ಭಾರತದ ರನ್ ಮೆಷಿನ್, ಟಿ20 ವಿಶ್ವಕಪ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದರು.

ಮತ್ತೊಮ್ಮೆ ಅರ್ಧಶತಕ ಬಾರಿಸಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೊಹ್ಲಿ 40 ಬಾಲ್‌ ಗಳಿಗೆ 50 ರನ್‌ ಬಾರಿಸಿ ತಂಡ 168 ರನ್‌ಗಳ ಗೌರವಾರ್ಹ ಮೊತ್ತ ತಲುಪಲು ಕಾರಣರಾದರು. 15ನೇ ಓವರ್‌ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ ಇಂಗ್ಲೆಂಡ್ ವಿರುದ್ಧ 43 ರನ್ ಗಳಿಸಿದ ಕೊಹ್ಲಿ, ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4 ಸಾವಿರ ರನ್ ಪೂರೈಸಿದರು.

ಇದೇ ಅಂಗಣದಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 44 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ ಬೌಂಡರಿಗಳ ನೆರವಿನಿಂದ ಅಜೇಯ 64 ರನ್ ಕಲೆಹಾಕಿದ್ದ ಕೊಹ್ಲಿ ಇಂಗ್ಲೆಂಡ್‌ ವಿರುದ್ಧವೂ ಅದೇ ಪ್ರದರ್ಶನ ನೀಡಿದರು.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕಿದ ಹೆಗ್ಗಳಿಕೆ ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರ ಹೆಸರಿನಲ್ಲಿತ್ತು. ಅವರು 23 ಇನ್ನಿಂಗ್ಸ್ ಗಳಲ್ಲಿ 1016 ರನ್ ಗಳಿಸಿ ಆಗ್ರಸ್ಥಾನಿಯಾಗಿದ್ದರು.

ಇದೀಗ ಕೊಹ್ಲಿ 115 ಅಂತಾರಾಷ್ಟ್ರೀಯ ಟಿ20 ಪಂದ್ಯಗಳ 107 ಇನ್ನಿಂಗ್ಸ್‌ ಗಳಲ್ಲಿ 4008 ರನ್‌ ಗಳಿಸಿದ್ದಾರೆ. 52.74 ರನ್‌ ಗಳ ಸರಾಸರಿಯಲ್ಲಿ 137.97 ಸ್ಟ್ರೈಕ್‌ ರೇಟ್‌ ನೊಂದಿಗೆ ಈ ದಾಖಲೆ ಬರೆದಿರುವ ವಿರಾಟ್‌ ಅವರ ಸಾಧನೆಯಲ್ಲಿ ಒಂದು ಶತಕ ಮತ್ತು 37 ಅರ್ಧ ಶತಕಗಳು ಸೇರಿವೆ. ಈ ಮೂಲಕ ತಾವು ಏಕೆ ವಿಶ್ವದ ಶ್ರೇಷ್ಠ ಆಟಗಾರ ಎನ್ನುವುದನ್ನು ಕೊಹ್ಲಿ ಮತ್ತೊಮ್ಮೆ ನಿರೂಪಿಸಿದ್ದಾರೆ.

ಈ ವರ್ಷದ ವಿಶ್ವಕಪ್‌ ಟೂರ್ನಿಯಲ್ಲಿ 270 ರನ್ ಗಳಿಸುವ ಮೂಲಕ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 2022 ರಲ್ಲಿ ಕೊಹ್ಲಿ ಟಿ20 ಪಂದ್ಯಗಳಲ್ಲಿ ಒಟ್ಟು 750 ರನ್‌ ಗಳಿಸಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಇದ್ದಾರೆ.

2022ರ ಅಕ್ಟೋಬರ್‌ನಲ್ಲಿ ಒಟ್ಟಾರೆ 205 ಟಿ20- ರನ್‌ಗಳನ್ನು ಬಾರಿಸುವ ಮೂಲಕ ಕೊಹ್ಲಿ ಇತ್ತೀಚೆಗಷ್ಟೇ ಐಸಿಸಿಯ ಮೊದಲ ಮಾಸಿಕ ಪ್ರಶಸ್ತಿ ಸ್ವೀಕರಿಸಿದ್ದರು. ಅಕ್ಟೋಬರ್‌ನಲ್ಲಿ ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್‌ ಎದುರು ವಿರಾಟ್‌ ಕೊಹ್ಲಿ ಅಜೇಯ ಅರ್ಧಶತಕಗಳನ್ನು ಬಾರಿಸಿದ್ದರು. ಇಂಗ್ಲೆಂಡ್ ವಿರುದ್ಧದ ಅರ್ಧಶತಕ ಸೇರಿದಂತೆ ಕೊಹ್ಲಿ
ನಾಲ್ಕು ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಡಿಲೇಡ್‌ ಮೈದಾನದಲ್ಲಿ ವಿರಾಟ್ ಕೊಹ್ಲಿ ಸರಾಸರಿ 90ಕ್ಕಿಂತ ಹೆಚ್ಚಿನ ರನ್ ‌ ಸರಾಸರಿ ಹೊಂದಿದ್ದಾರೆ.

ಪಾಕಿಸ್ತಾನ ವಿರುದ್ಧ (ಔಟಾಗದೆ 82) ಸ್ಮರಣೀಯ ಇನ್ನಿಂಗ್ಸ್ ಆಡಿದ ಕೊಹ್ಲಿ, ನೆದರ್ಲೆಂಡ್ಸ್ ವಿರುದ್ಧ (ಔಟಾಗದೆ 62) ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಆ ಬಳಿಕ ಬಾಂಗ್ಲಾದೇಶ ವಿರುದ್ಧವೂ ಅರ್ಧಶತಕ ಸಿಡಿಸಿದ್ದರು. ಈಗ ಇಂಗ್ಲೆಂಡ್‌ ವಿರುದ್ಧ ಮತ್ತೊಂದು ಅರ್ಧ ಶತಕ ಬಾರಿಸಿದ್ದಾರೆ. ಕಿಂಗ್ ಕೊಹ್ಲಿ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ವಿರುದ್ಧ ಮಾತ್ರ ಕಡಿಮೆ ಗಳಿಸಿದ್ದಾರೆ.

andolana

Recent Posts

ಮೈಸೂರಲ್ಲಿ ನಾಳೆಯಿಂದ ಮಾಗಿ ಉತ್ಸವ

ಮೈಸೂರು: ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಗೆ ಮೈಸೂರು ನಗರಕ್ಕೆ ಪ್ರವಾಸಿಗರನ್ನು ಸೆಳೆಯುವ ದೃಷ್ಟಿಯಿಂದ ಅರಮನೆ ಆವರಣದಲ್ಲಿ  ಫಲಪುಷ್ಪ ಪ್ರದರ್ಶನ ಒಳಗೊಂಡ…

7 mins ago

ಮಂಡ್ಯ ಜಿಲ್ಲೆ ಅಪ್ಪಟ ಕನ್ನಡಿಗರು ವಾಸಿಸುವ ನಾಡು: ಸಿಎಂ ಸಿದ್ದರಾಮಯ್ಯ

ಮಂಡ್ಯ: ಈ ಜಿಲ್ಲೆಯು ಅಪ್ಪಟ ಕನ್ನಡಿಗರು ವಾಸಿಸುವ ಜಿಲ್ಲೆಯಾಗಿದ್ದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ವಿಕಾಸಕ್ಕೆ ಈ ಜಿಲ್ಲೆಯ ಕೊಡುಗೆ…

11 mins ago

10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು: ಗೊ.ರು.ಚ ಹಕ್ಕೊತ್ತಾಯ

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…

26 mins ago

ಕಾರು ಪಲ್ಟಿ; ಇಬ್ಬರಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…

39 mins ago

ಸಂವಿಧಾನ ವಿಧಿ 371(ಜೆ) ಅಡಿಯಲ್ಲಿ ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ‌ ಹಾಗೂ…

1 hour ago

ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ಕರ್ನಾಟಕ ರೌಡಿಗಳ ರಾಜ್ಯವಾಗಿದೆ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು…

2 hours ago