ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಒಂದೊಂದು ವಿಶೇಷತೆಗಳಿಗೆ ಸಾಕ್ಷಿಯಾಗಿದ್ದು, ಇಂದು ನಡೆದ ಭಾರತ ಮತ್ತು ನೆದರ್‌ಲ್ಯಾಂಡ್ಸ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದ್ದಾರೆ.
ಭಾರತ ನೀಡಿದ 411ರನ್‌ಗಳ ಗುರಿ ಬೆನ್ನತ್ತಿದ ನೆದರ್‌ಲ್ಯಾಂಡ್ಸ್ ತಂಡವು ಅವನತಿಯತ್ತ ಹೆಜ್ಜೆಹಾಕಿದೆ. 72 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ನಂತರ ನಾಯಕ ಸ್ಕಾಟ್ ಎಡ್ವರ್ಡ್ಸ್ ಹಾಗೂ ಸೈಬ್ರಾಂಡ್ ಉತ್ತಮ ಜತೆಯಾಟವಾಡುತ್ತಿದ್ದರು. ಈ ಜತೆಯಾಟ ಬೇರ್ಪಡಿಸುವಲ್ಲಿ ವಿರಾಟ್ ಯಶಸ್ವಿಯಾಗಿದ್ದಾರೆ.
25ನೇ ಓವರ್ ಬೌಲ್ ಮಾಡಿದ ಕೊಹ್ಲಿ ತಾವು ಮಾಡಿದ ಮೂರನೇ ಎಸೆತದಲ್ಲಿ ನಾಯಕ ಎಡ್ವರ್ಡ್ಸ್ ರನ್ನು ಔಟ್ ಮಾಡಿದರು. ಕೀಪರ್ ಕೆ ಎಲ್ ರಾಹುಲ್ ಕೈಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ವಿರಾಟ್ ಕೊಹ್ಲಿ ತಮ್ಮ ಚೊಚ್ಚಲ ವಿಕೆಟ್ ಪಡೆದು ಸಂಭ್ರಮಿಸಿದರು.
ಈ ಪಂದ್ಯದಲ್ಲಿ ವಿರಾಟ್ 3 ಓವರ್ ಬೌಲ್ ಮಾಡಿ 13 ರನ್ ನೀಡಿ 1 ವಿಕೆಟ್ ಕಬಳಿಸಿದರು. ವಿರಾಟ್ ಜೊತೆ ಶುಭ್‌ಮನ್ ಗಿಲ್ ಹಾಗೂ ಸೂರ್ಯ ಕುಮಾರ್ ಯಾದವ್ ಕೂಡ ಬೌಲ್ ಮಾಡಿದ್ದು ವಿಶೇಷವಾಗಿತ್ತು.
ಟೂರ್ನಿ ಆರಂಭವಾಗುವ ಮುನ್ನವೇ ರೋಹಿತ್ ಶರ್ಮಾ ವಿರಾಟ್ ಅವರನ್ನು ನಾವು 6ನೇ ಬೌಲರ್ ಅಗಿ ಬಳಸಲಿದ್ದೇವೆ ಎಂದು ಹೇಳಿಕೆ ನೀಡಿದ್ದನ್ನು ನೆನೆಯಬಹುದಾಗಿದೆ.
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…