ಕ್ರೀಡೆ

ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕಿಂಗ್ ಕೊಹ್ಲಿಯೇ ಸರದಾರ

ಆಸ್ಟ್ರೇಲಿಯಾ ನೆಲದಲ್ಲಿ ನಡೆಯುತ್ತಿರುವ 2022ರ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ರನ್‌ ಮೆಶಿನ್‌ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4,000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಡಿಲೇಡ್ ನ ಓವಲ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ ವಿರುದ್ಧ 40 ಬಾಲ್‌ ಗಳಿಗೆ 50 ರನ್‌ ಬಾರಿಸಿದ ಕೊಹ್ಲಿ ಈ ತನಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4008 ಸಾವಿರ ರನ್‌ ಗಳ ಸಾಧನೆ ಮಾಡಿದ್ದಾರೆ.
ಕೊಹ್ಲಿ 115 ಅಂತಾರಾಷ್ಟ್ರೀಯ ಟಿ20 ಪಂದ್ಯಗಳ 107 ಇನ್ನಿಂಗ್ಸ್‌ ಗಳಲ್ಲಿ 4008 ರನ್‌ ಗಳಿಸಿದ್ದಾರೆ.
52.74 ರನ್‌ ಗಳ ಸರಾಸರಿಯಲ್ಲಿ 137.97 ಸ್ಟ್ರೈಕ್‌ ರೇಟ್‌ ನೊಂದಿಗೆ ಈ ದಾಖಲೆ ಬರೆದಿರುವ ವಿರಾಟ್‌ ಅವರ ಸಾಧನೆಯಲ್ಲಿ ಒಂದು ಶತಕ ಮತ್ತು 37 ಅರ್ಧ ಶತಕಗಳು ಸೇರಿವೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ದಾಖಲೆ ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರ ಹೆಸರಿನಲ್ಲಿತ್ತು. ಅವರು 23 ಇನ್ನಿಂಗ್ಸ್ ಗಳಲ್ಲಿ 1016 ರನ್ ಗಳಿಸಿ ಅಗ್ರಸ್ಥಾನಿಯಾಗಿದ್ದರು.
ವಿಶ್ವಕಪ್‌ ಟೂರ್ನಿಯಲ್ಲಿ 270 ರನ್ ಗಳಿಸುವ ಮೂಲಕ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
2022 ರಲ್ಲಿ ಕೊಹ್ಲಿ ಟಿ20 ಪಂದ್ಯಗಳಲ್ಲಿ ಒಟ್ಟು 750 ರನ್‌ ಗಳಿಸಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಭಾರತದ ಸೂರ್ಯಕುಮಾರ್ ಯಾದವ್ ಇದ್ದಾರೆ.
2022ರ ಅಕ್ಟೋಬರ್‌ನಲ್ಲಿ ಒಟ್ಟಾರೆ 205 ಟಿ20- ರನ್‌ಗಳನ್ನು ಬಾರಿಸುವ ಮೂಲಕ ಕೊಹ್ಲಿ ಇತ್ತೀಚೆಗಷ್ಟೇ ಐಸಿಸಿಯ ಮೊದಲ ಮಾಸಿಕ ಪ್ರಶಸ್ತಿ ಸ್ವೀಕರಿಸಿದ್ದರು.
ಇದೇ ಅಂಗಣದಲ್ಲಿ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ 44 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ ಬೌಂಡರಿಗಳ ನೆರವಿನಿಂದ ಕೊಹ್ಲಿ ಅಜೇಯ 64 ರನ್ ಕಲೆಹಾಕಿದ್ದರು.
ಪಾಕಿಸ್ತಾನ ವಿರುದ್ಧ (ಔಟಾಗದೆ 82) ಸ್ಮರಣೀಯ ಇನ್ನಿಂಗ್ಸ್ ಆಡಿದ ಕೊಹ್ಲಿ, ನೆದರ್ಲೆಂಡ್ಸ್ ವಿರುದ್ಧ (ಔಟಾಗದೆ 62) ನಿರ್ಣಾಯಕ ಇನ್ನಿಂಗ್ಸ್ ಆಡಿದ್ದರು. ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ವಿರುದ್ಧ ಮಾತ್ರ ಕಡಿಮೆ ರನ್‌ ಗಳಿಸಿದ್ದಾರೆ.
ವಿಶ್ವಕಪ್‌ ಟೂರ್ನಿಯಲ್ಲಿ ನಾಲ್ಕು ಅರ್ಧ ಶತಕಗಳನ್ನು ಬಾರಿಸಿರುವ ವಿರಾಟ್ ಕೊಹ್ಲಿಅಡಿಲೇಡ್‌ ಮೈದಾನದಲ್ಲಿ ಸರಾಸರಿ 90ಕ್ಕಿಂತ ಹೆಚ್ಚಿನ ರನ್ ‌ ಸರಾಸರಿ ಹೊಂದಿದ್ದಾರೆ.
andolana

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

5 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

5 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

5 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

5 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

6 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

6 hours ago