2024ರ ಐಪಿಎಲ್ ಸೀಸನ್ 17ರ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಎಡಗೈ ದಾಂಡಿದ ವೆಂಕಟೇಶ್ ಅಯ್ಯರ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಳೆದ ನವೆಂಬರ್‌ನಲ್ಲಿ ಕುಟುಂಬದ ಸಮ್ಮುಖದಲ್ಲಿ ಶೃತಿ ರಘುನಾಥನ್ ಅವರ ಜತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಇಂದು (ಜೂನ್.2) ವಿವಾಹವಾಗಿದ್ದಾರೆ.
ತಮ್ಮ ದಕ್ಷಿಣ ಭಾರತದ ಸಾಂಪ್ರದಾಯದಂತೆ ಉಡುಗೆ ಧರಿಸಿ ಮದುವೆಯಾಗಿದ್ದಾರೆ. ಸದ್ಯ ಅಯ್ಯರ್ ಅವರ ಮದುವೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನವ ಜೋಡಿಗಳಿಗೆ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದೆ.
ಈ ಸೀಸನ್‌ನಲ್ಲಿ ಕೆಕೆಆರ್ ಉತ್ತಮ ಪ್ರದರ್ಶನ ತೋರಿತ್ತು. ಎಲಿಮಿನೇಟರ್ ಹಾಗೂ ಪೈನಲ್ ಪಂದ್ಯದಲ್ಲಿ ತಂಡದ ಪರವಾಗಿ ಉತ್ತಮ ಪ್ರದರ್ಶನ ತೋರಿದ ಕೆಕೆಆರ್‌ಗೆ ಬ್ಯಾಟಿಂಗ್‌ನಲ್ಲಿ ಬಲ ತುಂಬಿದರು. ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. 2014ರ ಬಳಿಕ ಮೂರನೇ ಬಾರಿಗೆ 2024ರಲ್ಲಿ ಟ್ರೋಫಿ ಗೆದ್ದು ಬೀಗಿತು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…