ಕೊಲ್ಕತ್ತಾ: ಇಲ್ಲಿನ ಕ್ರಿಕೆಟ್ ಕಾಶಿ ಈಡೆನ್ ಗಾರ್ಡನ್‌ನಲ್ಲಿ ನಡೆದ ಐಪಿಎಲ್ ಟೂರ್ನಿಯ 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಕೊಲ್ಕತ್ತಾ ನೈಟ್‌ರೈಡರ್ಸ್ 18 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ಈ ಸೀಸನ್‌ನಲ್ಲಿ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿ ಹೊರಹೊಮ್ಮಿದೆ.
ಈ ಪಂದ್ಯಕ್ಕೆ ಕೆಲಕಾಲ ಮಳೆ ಅಡ್ಡಿಪಡಿಸಿತು. ಬಳಿಕ ಪಂದ್ಯವನ್ನು 16 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್‌ರೈಡರ್ಸ್ ನಿಗದಿತ 16 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿ, ಎದುರಾಳಿ ತಂಡಕ್ಕೆ 158ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 16 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 139 ರನ್‌ಗಳಿಸಿ 18 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.
ಕೊಲ್ಕತ್ತಾ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೆಕೆಆರ್‌ಗೆ ಈ ಬಾರಿ ಆರಂಭಿಕ ಆಘಾತ ಉಂಟಾಯಿತು. ಭರ್ಜರಿ ಫಾರ್ಮ್‌ನಲ್ಲಿರುವ ನರೈನ್ ಡಕ್‌ಔಟ್ ಆದರೇ, ಫಿಲಿಪ್ ಸಾಲ್ಟ್ 6(5) ರನ್‌ಗಳಿಸಿ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿದರು. ನಂತರ ಬಂದ ನಾಯಕ ಶ್ರೇಯಸ್ ಐಯ್ಯರ್ 7(10)ರನ್ ಗಳಿಸಿ ಔಟಾದರು.
ಬಳಿಕ ಒಂದಾದ ವೆಂಕಟೇಶ್ ಅಯ್ಯರ್ ಹಾಗೂ ನಿತೀಶ್ ರಾಣಾ ತಂಡಕ್ಕೆ ಚೇತರಿಕೆ ನೀಡಿದರು. ವೆಂಕಟೇಶ್ ಅಯ್ಯರ್ 21ಎಸೆತಗಳಲ್ಲಿ 6ಬೌಂಡರಿ ಹಾಗೂ 2ಸಿಕ್ಸರ್ ಸಹಿತ 42 ರನ್ ಗಳಿಸಿದರು. ಇವರಿಗೆ ಜತೆಯಾಗಿ ನಿತೀಶ್ ರಾಣಾ 33(23) ರನ್ ಗಳಿಸಿ ಔಟಾದರು. ಉಳಿದಂತೆ ರಸೆಲ್ 24(14), ರಿಂಕು ಸಿಂಗ್ 20(12), ರಣದೀಪ್ ಸಿಂಗ್ 17(8) ಸ್ಟಾರ್ಕ್ 2(2)ರನ್ ಗಳಿಸಿದರು.
ಮುಂಬೈ ಇಂಡಿಯನ್ಸ್ ಪರ ಜಸ್ಪ್ರಿತ್ ಬುಮ್ರಾ ಹಾಗೂ ಪಿಯೂಷ್ ಚಾವ್ಲಾ ತಲಾ 2, ತಷಾರಾ ಹಾಗೂ ಅನ್ಸುಲ್ ತಲಾ ಒಂದೊಂದು ವಿಕೆಟ್ ಪಡೆದರು.
ಮುಂಬೈ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಆರಂಭಿಕ ಆಟಗಾರರು ಉತ್ತಮ ಇನ್ನಿಂಗ್ಸ್ ಕಟ್ಟಿದರು. ಈ ಜೋಡಿಯು ಪವರ್ ಪ್ಲೇನಲ್ಲಿ ವಿಕೆಟ್ ನಷ್ಟವಿಲ್ಲದೇ 59ರನ್ ಕಲೆಹಾಕಿದರು. ಇಸಾನ್ ಕಿಸಾನ್ 22ಎಸೆತಗಳಲ್ಲಿ 5ಬೌಂಡರಿ, 2ಸಿಕ್ಸರ್ ಸಹಿತ 40ರನ್ ಬಾರಿಸಿದರು. ಇದು ಮುಂಬೈ ಪರ ಬಂದ ಅತ್ಯಧಿಕ ಮೊತ್ತ. ರೋಹಿತ್ ಶರ್ಮಾ 19(24) ರನ್ ಗಳಿಸಿ ಔಟಾದರು. ಈ ಜೋಡಿಯ ನಿರ್ಗಮನದ ನಂತರ ತಂಡಕ್ಕೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು.
ಸೂರ್ಯಕುಮಾರ್ ಯಾದವ್ 11(14), ನಾಯಕ ಹಾರ್ದಿಕ್ ಪಾಂಡ್ಯ 2(4), ಟಿಮ್ ಡೇವಿಡ್ ಡಕ್‌ಔಟ್, ವಧೇರ 3(3), ನಮನ್ ಧೀರ್ 17(6), ಕಾಂಬೋಜ್ 2(2), ಪಿಯೂಷ್ ಚಾವ್ಲಾ 1(2) ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ತಿಲಕ್ ವರ್ಮಾ 32(17)ರನ್ ಗಳಿಸಿಯೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.
ಕೊಲ್ಕತ್ತಾ ಪರ ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ರಸೆಲ್ ತಲಾ ಎರಡು ವಿಕೆಟ್ ಪಡೆದರೇ, ನರೈನ್ ಒಂದು ವಿಕೆಟ್ ಪಡೆದು ಮಿಂಚಿದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…