ಕ್ರೀಡೆ

IPL 2024: ಮುಂಬೈ ಇಂಡಿಯನ್ಸ್‌ ವಿರುದ್ಧ ಗೆದ್ದು ಪ್ಲೇ-ಆಫ್‌ಗೆ ಲಗ್ಗೆಯಿಟ್ಟ ಕೆಕೆಆರ್‌

ಕೊಲ್ಕತ್ತಾ: ಇಲ್ಲಿನ ಕ್ರಿಕೆಟ್‌ ಕಾಶಿ ಈಡೆನ್‌ ಗಾರ್ಡನ್‌ನಲ್ಲಿ ನಡೆದ ಐಪಿಎಲ್‌ ಟೂರ್ನಿಯ 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ವಿರುದ್ಧ ಕೊಲ್ಕತ್ತಾ ನೈಟ್‌ರೈಡರ್ಸ್‌ 18 ರನ್‌ಗಳ ಅಂತರದಿಂದ ಗೆದ್ದು ಬೀಗಿದೆ. ಆ ಮೂಲಕ ಈ ಸೀಸನ್‌ನಲ್ಲಿ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದ ಮೊದಲ ತಂಡವಾಗಿ ಹೊರಹೊಮ್ಮಿದೆ.

ಈ ಪಂದ್ಯಕ್ಕೆ ಕೆಲಕಾಲ ಮಳೆ ಅಡ್ಡಿಪಡಿಸಿತು. ಬಳಿಕ ಪಂದ್ಯವನ್ನು 16 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಇನ್ನು ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೊಲ್ಕತ್ತಾ ನೈಟ್‌ರೈಡರ್ಸ್‌ ನಿಗದಿತ 16 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 157 ರನ್‌ ಗಳಿಸಿ, ಎದುರಾಳಿ ತಂಡಕ್ಕೆ 158ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 16 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 139 ರನ್‌ಗಳಿಸಿ 18 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಕೊಲ್ಕತ್ತಾ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಕೆಕೆಆರ್‌ಗೆ ಈ ಬಾರಿ ಆರಂಭಿಕ ಆಘಾತ ಉಂಟಾಯಿತು. ಭರ್ಜರಿ ಫಾರ್ಮ್‌ನಲ್ಲಿರುವ ನರೈನ್‌ ಡಕ್‌ಔಟ್‌ ಆದರೇ, ಫಿಲಿಪ್‌ ಸಾಲ್ಟ್‌ 6(5) ರನ್‌ಗಳಿಸಿ ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿದರು. ನಂತರ ಬಂದ ನಾಯಕ ಶ್ರೇಯಸ್‌ ಐಯ್ಯರ್‌ 7(10)ರನ್‌ ಗಳಿಸಿ ಔಟಾದರು.

ಬಳಿಕ ಒಂದಾದ ವೆಂಕಟೇಶ್‌ ಅಯ್ಯರ್‌ ಹಾಗೂ ನಿತೀಶ್‌ ರಾಣಾ ತಂಡಕ್ಕೆ ಚೇತರಿಕೆ ನೀಡಿದರು. ವೆಂಕಟೇಶ್‌ ಅಯ್ಯರ್‌ 21ಎಸೆತಗಳಲ್ಲಿ 6ಬೌಂಡರಿ ಹಾಗೂ 2ಸಿಕ್ಸರ್‌ ಸಹಿತ 42 ರನ್‌ ಗಳಿಸಿದರು. ಇವರಿಗೆ ಜತೆಯಾಗಿ ನಿತೀಶ್‌ ರಾಣಾ 33(23) ರನ್‌ ಗಳಿಸಿ ಔಟಾದರು. ಉಳಿದಂತೆ ರಸೆಲ್‌ 24(14), ರಿಂಕು ಸಿಂಗ್‌ 20(12), ರಣದೀಪ್‌ ಸಿಂಗ್‌ 17(8) ಸ್ಟಾರ್ಕ್‌ 2(2)ರನ್‌ ಗಳಿಸಿದರು.

ಮುಂಬೈ ಇಂಡಿಯನ್ಸ್‌ ಪರ ಜಸ್ಪ್ರಿತ್‌ ಬುಮ್ರಾ ಹಾಗೂ ಪಿಯೂಷ್‌ ಚಾವ್ಲಾ ತಲಾ 2, ತಷಾರಾ ಹಾಗೂ ಅನ್ಸುಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಮುಂಬೈ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಆರಂಭಿಕ ಆಟಗಾರರು ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಈ ಜೋಡಿಯು ಪವರ್‌ ಪ್ಲೇನಲ್ಲಿ ವಿಕೆಟ್‌ ನಷ್ಟವಿಲ್ಲದೇ 59ರನ್‌ ಕಲೆಹಾಕಿದರು. ಇಸಾನ್‌ ಕಿಸಾನ್‌ 22ಎಸೆತಗಳಲ್ಲಿ 5ಬೌಂಡರಿ, 2ಸಿಕ್ಸರ್‌ ಸಹಿತ 40ರನ್‌ ಬಾರಿಸಿದರು. ಇದು ಮುಂಬೈ ಪರ ಬಂದ ಅತ್ಯಧಿಕ ಮೊತ್ತ. ರೋಹಿತ್‌ ಶರ್ಮಾ 19(24) ರನ್‌ ಗಳಿಸಿ ಔಟಾದರು. ಈ ಜೋಡಿಯ ನಿರ್ಗಮನದ ನಂತರ ತಂಡಕ್ಕೆ ಮಧ್ಯಮ ಕ್ರಮಾಂಕ ಕೈಕೊಟ್ಟಿತು.

ಸೂರ್ಯಕುಮಾರ್‌ ಯಾದವ್‌ 11(14), ನಾಯಕ ಹಾರ್ದಿಕ್‌ ಪಾಂಡ್ಯ 2(4), ಟಿಮ್‌ ಡೇವಿಡ್‌ ಡಕ್‌ಔಟ್‌, ವಧೇರ 3(3), ನಮನ್‌ ಧೀರ್‌ 17(6), ಕಾಂಬೋಜ್‌ 2(2), ಪಿಯೂಷ್‌ ಚಾವ್ಲಾ 1(2) ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ತಿಲಕ್‌ ವರ್ಮಾ 32(17)ರನ್‌ ಗಳಿಸಿಯೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ.

ಕೊಲ್ಕತ್ತಾ ಪರ ಹರ್ಷಿತ್‌ ರಾಣಾ, ವರುಣ್‌ ಚಕ್ರವರ್ತಿ, ರಸೆಲ್‌ ತಲಾ ಎರಡು ವಿಕೆಟ್‌ ಪಡೆದರೇ, ನರೈನ್‌ ಒಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

40 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

1 hour ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

1 hour ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

5 hours ago