ಮಂಗಳೂರು: ಕನ್ನಡ ಖ್ಯಾತ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ಮದುವೆಯಾದ ಮೊದಲ ಬಾರಿಗೆ ತಮ್ಮ ಸೋದರ ಮಾವ ಸುನೀಲ್ ಶೆಟ್ಟಿ ಅವರ ಹುಟ್ಟೂರಾದ ಮಂಗಳೂರಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ.
ಇಲ್ಲಿನ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಅವರ ಪತ್ನಿ ಅಥಿಯಾ ಶೆಟ್ಟಿ ಜತೆಯಲ್ಲಿ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮುಲ್ಕಿಯ ಶಿಮಂತೂರು ಶ್ರೀ ಆದಿ ಜರ್ನಾಧನ ದೇವಾಲಯ ದರ್ಶನ, ಕಕ್ವಗುತ್ತು ಮೂಲನಾಗ ದೇವರ ದರ್ಶನ ಪಡೆದ ಬಳಿಕ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಸಾದ ವಿನಿಯೋಗಿಸಿದ್ದಾರೆ.
ಮೂಲತಃ ಮುಲ್ಕಿ ಮೂಲದವರಾದ ಸುನೀಶ್ ಶೆಟ್ಟಿ ಬಾಲಿವುಡ್‌ಗೆ ಎಂಟ್ರಿಕೊಟ್ಟು ಬಳಿಕ ಬಹಳ ದೊಡ್ಡ ಹೆಸರು ಮಾಡಿದರು. 2023ರ ಜನವರಿಯಲ್ಲಿ ಕೆ ಎಲ್ ರಾಹುಲ್ ಜತೆಯಲ್ಲಿ ಸುನೀಲ್ ಶೆಟ್ಟಿ ತಮ್ಮ ಮಗಳ ಮದುವೆ ಮಾಡಿದರು.
ಇದಾದ ಬಳಿಕ ಇದೇ ಮೊದಲ ಬಾರಿಗೆ ಕೆಎಲ್ ರಾಹುಲ್ ದಂಪತಿ ಮುಲ್ಕಿಗೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಇನ್ನು ಕೆಎಲ್ ರಾಹುಲ್ ಕಂಡ ಅಭಿಮಾನಿಗಳು ಫೋಟೋಗಾಗಿ ಮುಗಿಬಿದ್ದಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…