ಅಡಿಲೇಡ್: ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ದ್ವೀತಿಯ ಪಂದ್ಯವು ಅಡಿಲೇಡ್‌ನ ಓವೆಲ್ ಮೈದಾನದಲ್ಲಿ ಶುಕ್ರವಾರ (ಡಿ.6) ಆರಂಭವಾಗಲಿದೆ. ಡೇ-ನೈಟ್ ಟೆಸ್ಟ್ ಪಂದ್ಯವಾಗಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.
ಈ ಪಂದ್ಯದಲ್ಲಿ ಇಂಡಿಯಾದ ಪರ ಒಂದು ಕಡೆ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಿದರೆ, ಮತ್ತೊಂದು ಕಡೆ ಯಾರು ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಈಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡುವ ಮೂಲಕ ಖಚಿತಪಡಿಸಿದ್ದಾರೆ.
ಪಿಂಕ್‌ಬಾಲ್ ಟೆಸ್ಟ್ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕರಾಗಿ ಆಡಿದ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಅವರೇ ಈ ಟೆಸ್ಟ್‌ನಲ್ಲೂ ಕಣಕ್ಕಿಳೀಯಲಿದ್ದು ನಾನು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದೇನೆ ಎಂದು ತಿಳಿಸಿದ್ದಾರೆ.
ಮೊದಲ ಟೆಸ್ಟನಲ್ಲಿ ರೋಹಿತ್ ಶರ್ಮಾ ಅಲಭ್ಯರಾಗಿದ್ದರು. ಅವರ ಗೈರುಹಾಜರಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಪ್ರಥಮ ಟೆಸ್ಟ್‌ನಲ್ಲಿ ಒಟ್ಟು 103 ರನ್ ಗಳಿಸಿ ಭಾರತದ ಗೆಲುವಿಗೆ ಕಾಣಿಕೆ ನೀಡಿದರು.
ಈಗ ಎರಡನೇ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಆಡಲು ಸಜ್ಜಾಗಿದ್ದಾರೆ. ಆರಂಭಿಕ ಬ್ಯಾಟರ್‌ಗಳಾಗಿ ಪರ್ತ್ ಟೆಸ್ಟ್‌ನಲ್ಲಿ ಜೈಸ್ವಾಲ್ ಮತ್ತು ಕೆಎಲ್ ರಾಹುಲ್ ಯಶಸ್ಸಾದ ಕಾರಣ ಇವರು ಮಧ್ಯಮ ಕ್ರಮಾಂಕದಲ್ಲಿ ಆಡಲು ನಿರ್ಧರಿಸಿದ್ದಾರೆ.
ಮೊದಲ ಪಂದ್ಯದಿಂದ ಹೊರಗುಳಿದಿದ್ದ ಶುಭಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದರೆ, ಐದನೇ ಕ್ರಮಾಂಕದಲ್ಲಿ ರೋಹಿತ್ ಅಥವಾ ರಿಷಭ್ ಕಾಣಿಸಿಕೊಳ್ಳಲಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…