ಕ್ರೀಡೆ

ಆಸೀಸ್‌ ವಿರುದ್ಧದ 2ನೇ ಟೆಸ್ಟ್‌ನಲ್ಲಿ ಆರಂಭಿಕರಾಗಿ ಜೈಸ್ವಾಲ್‌ – ಕೆಎಲ್‌ ರಾಹುಲ್‌ ಕಣಕ್ಕೆ: ರೋಹಿತ್‌ ಶರ್ಮಾ ಸ್ಪಷ್ಟನೆ

ಅಡಿಲೇಡ್:‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್‌ ಸರಣಿಯ ದ್ವೀತಿಯ ಪಂದ್ಯವು ಅಡಿಲೇಡ್‌ನ ಓವೆಲ್‌ ಮೈದಾನದಲ್ಲಿ ಶುಕ್ರವಾರ (ಡಿ.6) ಆರಂಭವಾಗಲಿದೆ. ಡೇ-ನೈಟ್‌‌ ಟೆಸ್ಟ್ ಪಂದ್ಯವಾಗಿದ್ದು, ಭಾರತೀಯ ಕಾಲಮಾನ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.

ಈ ಪಂದ್ಯದಲ್ಲಿ ಇಂಡಿಯಾದ ಪರ ಒಂದು ಕಡೆ ಜೈಸ್ವಾಲ್‌ ಇನ್ನಿಂಗ್ಸ್‌ ಆರಂಭಿಸಿದರೆ, ಮತ್ತೊಂದು ಕಡೆ ಯಾರು ಕಣಕ್ಕಿಳಿಯುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಈಗ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮಾಹಿತಿ ನೀಡುವ ಮೂಲಕ ಖಚಿತಪಡಿಸಿದ್ದಾರೆ.

ಪಿಂಕ್‌ಬಾಲ್‌ ಟೆಸ್ಟ್‌ ನಿಮಿತ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌ ಮೊದಲ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕರಾಗಿ ಆಡಿದ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್‌ ಅವರೇ ಈ ಟೆಸ್ಟ್‌ನಲ್ಲೂ ಕಣಕ್ಕಿಳೀಯಲಿದ್ದು ನಾನು ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದೇನೆ ಎಂದು ತಿಳಿಸಿದ್ದಾರೆ.

ಮೊದಲ ಟೆಸ್ಟನಲ್ಲಿ ರೋಹಿತ್‌ ಶರ್ಮಾ ಅಲಭ್ಯರಾಗಿದ್ದರು. ಅವರ ಗೈರುಹಾಜರಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್‌ ರಾಹುಲ್‌ ಪ್ರಥಮ ಟೆಸ್ಟ್‌ನಲ್ಲಿ ಒಟ್ಟು 103 ರನ್‌ ಗಳಿಸಿ ಭಾರತದ ಗೆಲುವಿಗೆ ಕಾಣಿಕೆ ನೀಡಿದರು.

ಈಗ ಎರಡನೇ ಟೆಸ್ಟ್‌ನಲ್ಲಿ ರೋಹಿತ್‌ ಶರ್ಮಾ ಆಡಲು ಸಜ್ಜಾಗಿದ್ದಾರೆ. ಆರಂಭಿಕ ಬ್ಯಾಟರ್‌ಗಳಾಗಿ ಪರ್ತ್‌ ಟೆಸ್ಟ್‌ನಲ್ಲಿ ಜೈಸ್ವಾಲ್‌ ಮತ್ತು ಕೆಎಲ್‌ ರಾಹುಲ್ ಯಶಸ್ಸಾದ ಕಾರಣ ಇವರು ಮಧ್ಯಮ ಕ್ರಮಾಂಕದಲ್ಲಿ ಆಡಲು ನಿರ್ಧರಿಸಿದ್ದಾರೆ.

ಮೊದಲ ಪಂದ್ಯದಿಂದ ಹೊರಗುಳಿದಿದ್ದ ಶುಭಮನ್‌ ಗಿಲ್‌ ಮೂರನೇ ಕ್ರಮಾಂಕದಲ್ಲಿ ಆಡುವುದು ಬಹುತೇಕ ಖಚಿತವಾಗಿದೆ. ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್‌ ಕೊಹ್ಲಿ ಆಡಿದರೆ, ಐದನೇ ಕ್ರಮಾಂಕದಲ್ಲಿ ರೋಹಿತ್‌ ಅಥವಾ ರಿಷಭ್‌ ಕಾಣಿಸಿಕೊಳ್ಳಲಿದ್ದಾರೆ.

andolana

Recent Posts

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

8 mins ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

14 mins ago

ದಸರಾ ಆಹಾರ ಮೇಳ: 100 ಮಳಿಗೆಗೆ 587 ಅರ್ಜಿ!

ಕೇಶವ ಎಂ. ರಾಜ್ಯದ ೩೦ ಜಿಲ್ಲೆಗಳಿಂದಲೂ ಅರ್ಜಿ ಸಲ್ಲಿಕೆ; ಲಾಟರಿ ಎತ್ತುವ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ; ಉದ್ಯಮಿಗಳ ಆಕ್ಷೇಪ ಮೈಸೂರು:…

32 mins ago

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

20 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

20 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

21 hours ago