ಕ್ರೀಡೆ

ಟೆಸ್ಟ್ ಶತಕದ ಬರ ನೀಗಿಸಿಕೊಂಡ ಕೊಹ್ಲಿ: 500ನೇ ಪಂದ್ಯದಲ್ಲಿ ಸಚಿನ್, ಲಾರಾ ದಾಖಲೆ ಪತನ

ಪೋರ್ಟ್ ಆಫ್ ಸ್ಪೇನ್: ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಕೊನೆಗೂ ತಮ್ಮ ವಿದೇಶದಲ್ಲಿ ಟೆಸ್ಟ್ ಶತಕದ ಬರ ನೀಗಿಸಿಕೊಂಡಿದ್ದು, ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಅಮೋಘ ಶತಕ ಸಿಡಿಸುವ ಮೂಲಕ ತಮ್ಮ500ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್‌ ನಡುವಣ ನೂರನೇ ಪಂದ್ಯವೂ ಆಗಿರುವ ಪಂದ್ಯದಲ್ಲಿ ಕೊಹ್ಲಿ 121ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿಗೆ ಇದು 29ನೇ ಅಂತಾರಾಷ್ಟ್ರೀಯ ಟೆಸ್ಟ್ ಶತಕವಾಗಿದ್ದು ಆ ಮೂಲಕ ಕೊಹ್ಲಿ ದೀರ್ಘ ಕಾಲದ ವಿದೇಶಿ ನೆಲದಲ್ಲಿ ಟೆಸ್ಟ್ ಶತಕದ ಬರ ನೀಗಿಸಿಕೊಂಡಿದ್ದಾರೆ. 2018 ರ ಡಿಸೆಂಬರ್ ನಂತರ ವಿದೇಶದಲ್ಲಿ ಕೊಹ್ಲಿ ಈ ವರೆಗೂ ಟೆಸ್ಟ್ ಶತಕ ಸಿಡಿಸಿರಲಿಲ್ಲ.

ಸಚಿನ್ ತೆಂಡೂಲ್ಕರ್-ಲಾರಾ ದಾಖಲೆ ಪತನ
ಅಂತೆಯೇ ಇದು ವಿರಾಟ್ ಕೊಹ್ಲಿ ಅವರ 76ನೇ ಅಂತಾರಾಷ್ಟ್ರೀಯ ಶತಕವಾಗಿದ್ದು, ಈ ಮೂಲಕ 500 ಪಂದ್ಯಗಳಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಭಾರತ ತಂಡದ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಈ ಹಿಂದೆ ಈ ಸ್ಥಾನದಲ್ಲಿ ಭಾರತದ ಸವ್ಯಸಾಚಿ ಸಚಿನ್ ತೆಂಡೂಲ್ಕರ್ ಇದ್ದರು. ಸಚಿನ್ ತಮ್ಮ ಮೊದಲ 500 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 75 ಅಂತರಾಷ್ಟ್ರೀಯ ಶತಕಗಳನ್ನು ಹೊಂದಿದ್ದರು. ಆದರೆ ಕೊಹ್ಲಿ 76ನೇ ಶತಕ ಸಿಡಿಸುವ ಮೂಲಕ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

ಲಾರಾ ದಾಖಲೆಯೂ ಪತನ
ಇನ್ನು ಇದೇ ಪಂದ್ಯದಲ್ಲಿ ಕೊಹ್ಲಿ ವೆಸ್ಟ್ ಇಂಡೀಸ್ ನ ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಅವರ ದಾಖಲೆಯನ್ನೂ ಮುರಿದಿದ್ದು, 4ನೇ ಕ್ರಮಾಂಕದಲ್ಲಿ ಅತೀ ಹೆಚ್ಚು ಶತಕ ಸಿಡಿಸಿರುವ ಬ್ಯಾಟರ್ ಗಳ ಪಟ್ಟಿಯಲ್ಲಿ ಲಾರಾ ಅವರ ದಾಖಲೆಯನ್ನು ಮುರಿದು 4ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಬ್ರಿಯಾನ್ ಲಾರಾ 24 ಶತಕ ಸಿಡಿಸಿದ್ದು, ಅವರು ಇದೀಗ 5ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. 25 ಶತಕ ಸಿಡಿಸಿರುವ ಕೊಹ್ಲಿ 4ನೇ ಸ್ಥಾನಕ್ಕೇರಿದ್ದು, ಈ ಪಟ್ಟಿಯಲ್ಲಿ 44 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದು, 35 ಶತಕ ಸಿಡಿಸಿರುವ ಜಾಕಾಲಿಸ್ 2ನೇ ಸ್ಥಾನದಲ್ಲಿದ್ದಾರೆ. 30 ಶತಕಗಳೊಂದಿಗೆ ಶ್ರೀಲಂಕಾದ ಮಹೇಲಾ ಜಯವರ್ಧನೆ 3ನೇ ಸ್ಥಾನದಲ್ಲಿದ್ದಾರೆ.

Most hundreds at No.4 in Tests
44 – Sachin Tendulkar
35 – Jacques Kallis
30 – Mahela Jayawardene
25 – Virat Kohli
24 – Brian Lara

500ನೇ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಕೊಹ್ಲಿ
ಅಂತೆಯೇ 500ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದು, ಕೊಹ್ಲಿ ಈಗ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಹೊಂದಿರುವ ಆಟಗಾರರ ಪಟ್ಟಿಯಲ್ಲಿ ಜಂಟಿ 2ನೇ ಸ್ಥಾನದಲ್ಲಿದ್ದಾರೆ. ಕೊಹ್ಲಿ ವಿಂಡೀಸ್ ವಿರುದ್ಧ ಒಟ್ಟು 12 ಶತಕಗಳನ್ನು ಸಿಡಿಸಿದ್ದು, ದಕ್ಷಿಣ ಆಫ್ರಿಕಾದ ಜಾಕಾಲಿಸ್ ಕೂಡ 12 ಶತತಗಳನ್ನು ಸಿಡಿಸಿ 2ನೇ ಸ್ಥಾನದಲ್ಲಿದ್ದಾರೆ. ಅಗ್ರ ಸ್ಥಾನದಲ್ಲಿ ಭಾರತ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಇದ್ದು, ಅವರು 13 ಶತಕಗಳನ್ನು ಸಿಡಿಸಿದ್ದಾರೆ.

andolanait

Recent Posts

ಚುನಾವಣಾ ಆಯೋಗದ ವಿರುದ್ಧ ನ.5ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ನವೆಂಬರ್‌ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಬಿ.ಕೆ.…

8 hours ago

ದಿಲ್ಲಿಯಲ್ಲಿ 2 ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅಸ್ತು – ನ.9 ರಿಂದ ಮತ್ತೆ ಸಂಪೂರ್ಣ ನಿಷೇಧ

ನವದೆಹಲಿ: ದೀಪಾವಳಿ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್‌ ಅನುಮತಿ…

9 hours ago

ಫ್ರಾಂಕ್‌ಫರ್ಟ್‌ನಲ್ಲಿ ಪ್ರತಿಭಟನೆ ಹಿಂಸಾಚಾರ: 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 54 ಮಂದಿ ಬಂಧನ!

ಬರ್ಲಿನ್:‌ ಜರ್ಮನಿಯ ಪ್ರಮುಖ ವಾಣಿಜ್ಯ ನಗರ ಫ್ರಾಂಕ್‌ಫರ್ಟ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೀಡಿರುವ ವರದಿಯ ಪ್ರಕಾರ, ದುಷ್ಕರ್ಮಿಗಳು…

9 hours ago

ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ!

ಬೆಂಗಳೂರು: ಅರ್ನಬ್‌ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ…

10 hours ago

ಜಿ.ಪಂ.–ತಾ.ಪಂ. ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಬಳಕೆ ಸಾಧ್ಯತೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ ಪಟ್ಟಿಯ ಬದಲು ಹಳೆಯ ಮತದಾರರ ಪಟ್ಟಿಯ…

10 hours ago

ರಾಮಮಂದಿರ ದೇಣಿಗೆ ದುರುಪಯೋಗ ಆರೋಪ: ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ…

11 hours ago