ಕ್ರೀಡೆ

ಆಸೀಸ್‌ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ಗೆ ಡಿಕ್ಕಿ ಹೊಡೆದ ವಿರಾಟ್‌ ಕೊಹ್ಲಿಗೆ ದಂಡ

ಮೆಲ್ಬೊರ್ನ್‌: ಭಾರತ ವಿರುದ್ಧದ 4ನೇ ಟೆಸ್ಟ್‌ ಪಂದ್ಯದಲ್ಲಿ ಪಾದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಆಟಗಾರ ಸ್ಯಾಮ್‌ ಕಾನ್‌ಸ್ಟಸ್‌ ಅವರಿಗೆ ಭಾರತದ ಕ್ರಿಕೆಟರ್‌ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದು ದಂಡನೆಗೆ ಒಳಗಾಗಿದ್ದಾರೆ.

ಐಸಿಸಿ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ವಿರಾಟ್‌ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ ಯುವ ಆಟಗಾರನ ಜೊತೆ ಅನುಚಿತವಾಗಿ ವರ್ತಿಸಿದ್ದಕ್ಕೆ ಒಂದು ಡಿಮೆರಿಟ್‌ ಪಾಯಿಂಟ್‌ ನೀಡಲಾಗಿದೆ.

ಐಸಿಸಿ ನಿಯಮದ ಪ್ರಕಾರ ಯಾವುದೇ ಕ್ರಿಕೆಟರ್‌ ನಾಲ್ಕು ಡಿಮೆರಿಟ್‌ ಪಾಯಿಂಟ್‌ಗಳಿಗೆ ಒಳಗಾದರೆ ಒಂದು ಪಂದ್ಯ ನಿಷೇಧಕ್ಕೆ ಒಳಗಾಗಬೇಕಾಗುತ್ತದೆ.

ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4ನೇ ಟೆಸ್ಟ್‌ ಪಂದ್ಯದ ವೇಳೆ, ಓವರ್ ಆದ ನಂತರ ಏಕಾಏಕಿ ಕಾನ್‌ಸ್ಟಸ್‌ ಬಳಿ ತೆರಳಿದ ವಿರಾಟ್‌ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದರು. ಈ ವೇಳೆ ಇಬ್ಬರ ನಡುವೆ ಸ್ವಲ್ಪ ಸಮಯ ವಾಗ್ವಾದ ನಡೆಯಿತು.

ಈ ಘಟನೆ ಬಗ್ಗೆ 19 ವರ್ಷದ ಕಾನ್‌ಸ್ಟಸ್‌, ಆಟದ ಸಂದರ್ಭದಲ್ಲಿ ಹೀಗಾಗುವುದು ಸಹಜ. ಕೊಹ್ಲಿ ಆಕಸ್ಮಿಕವಾಗಿ ನನಗೆ ಡಿಕ್ಕಿ ಹೊಡೆದಿರಬಹುದು. ಕ್ರಿಕೆಟ್‌ ಆಟದಲ್ಲಿ ಒತ್ತಡ ಇರುವುದರಿಂದ ಇದು ಸಾಮಾನ್ಯ ಎಂದು ಹೇಳಿದ್ದರು.

ಈ ಘಟನೆ ಕುರಿತಂತೆ ಕ್ರಿಕೆಟ್‌ನ ಹಲವು ಮಾಜಿ ಆಟಗಾರರು ಟೀಕೆ ಮಾಡಿದ್ದರು. ಯುವ ಆಟಗಾರನ ಜೊತೆ ಕೊಹ್ಲಿಯ ಈ ವರ್ತನೆ ಸರಿಯಿಲ್ಲ. ಕೊಹ್ಲಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌, ಇಂಗ್ಲೆಂಡ್‌ನ ಮಾಜಿ ಆಟಗಾರ ಮೈಕಲ್‌ ವಾನ್‌ ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ವಿರಾಟ್‌ ಕೊಹ್ಲಿಗೆ ಪಂದ್ಯ ಶುಲ್ಕದ ಶೇಕಡಾ.20ರಷ್ಟು ದಂಡ ವಿಧಿಸಲಾಗಿದೆ

 

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

4 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

4 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

5 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

5 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

5 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

5 hours ago