ಇಂದೋರ್ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 41ರನ್‌ಗಳಿಂದ ಸೋಲಿಸಿದ ನ್ಯೂಜಿಲೆಂಡ್ 1-2 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್, ಭಾರತದ ಗೆಲುವಿಗೆ 338 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತ್ತು.
ಈ ಬೃಹತ್ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ರೋಹಿತ್ ಶರ್ಮಾ (11 ರನ್), ಶುಭಮನ್ ಗಿಲ್ (23 ರನ್) ವಿಕೆಟ್ ಒಪ್ಪಿಸಿ ಹೊರನಡೆದರು. ನಂತರ ಬಂದ ಶ್ರೇಯಸ್ ಅಯ್ಯರ್ (3 ರನ್), ಕೆ.ಎಲ್. ರಾಹುಲ್ (1 ರನ್) ಗಳಿಸಿ ಪೆವಿಲಿಯನ್ ಸೇರಿಕೊಂಡರು. ಒಂದು ಹಂತದಲ್ಲಿ ಭಾರತ ತಂಡ 200 ತಲುಪುವುದು ಕೂಡ ಅಸಾಧ್ಯ ಎಂಬ ವಾತಾವರಣ ನಿರ್ಮಾಣವಾಯಿತು.
ಬೃಹತ್ ಮೊತ್ತದ ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ಬ್ಯಾಟ್ಸ್ಮನ್ಗಳ ವೈಫಲ್ಯದಿಂದಾಗಿ ಸೋಲಿಗೆ ಕೊರಳೊಡ್ಡಿತು. ತಂಡದ ಪರ ವಿರಾಟ್ ಕೊಹ್ಲಿ(124) ಏಕಾಂಗಿ ಹೋರಾಟ ನೀಡಿದರಾದರೂ, ಅವರಿಗೆ ಪ್ರಮುಖ ಬ್ಯಾಟ್ಸ್ಮನ್ಗಳು ಸಾಥ್ ನೀಡಲಿಲ್ಲ. ಹೀಗಾಗಿ ತಂಡಕ್ಕೆ ಸರಣಿ ಸೋಲಿನ ಆಘಾತ ಎದುರಾಯಿತು.




