ಹೊಸದಿಲ್ಲಿ: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತದ ಪುರುಷರ ಮತ್ತು ಮಹಿಳೆಯರ ತಂಡಗಳು ಕೊಕ್ಕೊ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿವೆ.
ಇಂದು ನಡೆದ ಸೆಮಿಫೈನಲ್‌ನಲ್ಲಿ ಪುರುಷರ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಫೈನಲ್‌ನಲ್ಲಿ ನೇಪಾಳ ತಂಡವನ್ನು ಎದುರಿಸಲಿವೆ. ಮತ್ತೊಂದು ಸೆಮಿಫೈನಲ್‌ನಲ್ಲಿ ನೇಪಾಳ ತಂಡವನ್ನು ತಂಡವು 72-20ರಿಂದ ಇರಾನ್ ತಂಡವನ್ನು ಸೋಲಿಸಿತು.
ಭಾರತದ ಮಹಿಳೆಯರ ತಂಡವು 66-16 ರಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿತು. ಫೈನಲ್‌ನಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಮತ್ತೊಂದು ನಾಲ್ಕರ ಘಟ್ಟದ ಪಂದ್ಯದಲ್ಲಿ ನೇಪಾಳ ತಂಡವು 89-18ರಿಂದ ಉಗಾಂಡ ತಂಡವನ್ನು ಮಣಿಸಿತು.