ಇಂದೋರ್: ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿ 2024ರ ಗುಂಪು-ಬಿ ಪಂದ್ಯದಲ್ಲಿ, ತಮಿಳುನಾಡು ವಿರುದ್ಧ ಕರ್ನಾಟಕ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈವರೆಗೆ 5 ಪಂದ್ಯವನ್ನಾಡಿ 3ರಲ್ಲಿ ಜಯಗಳಿಸಿರುವ ಕರ್ನಾಟಕ ತಂಡವು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಟಾಸ್ ಗೆದ್ದ ತಮಿಳುನಾಡು ತಂಡ ಬ್ಯಾಟಿಂಗ್ ಆಯ್ದುಕೊಂಡಿತ್ತು. ಅದರಂತೆ ಇನ್ನಿಂಗ್ಸ್ ಆರಂಭಿಸಿದ ತಮಿಳುನಾಡು ಬ್ಯಾಟರ್‌ಗಳು ಕರ್ನಾಟಕದ ವೇಗಿಗಳ ಮುಂದೆ ಆರಂಭದಲ್ಲೇ ಮುಗ್ಗರಿಸಿದ್ದಾರೆ.
ಜಗದೀಶನ್(0) ಖಾತೆ ತೆರೆಯುವ ಮುನ್ನವೇ ವಿ.ಕೌಶಿಕ್ ಇವರ ವಿಕೆಟ್ ಪಡೆದು ಆರಂಭದ ಯಶಸ್ಸನ್ನು ತಂದು ಕೊಟ್ಟರು. ನಂತರ ಇಂದ್ರಜಿತ್ (5) ರನ್ ಗಳಿಸಿ ಆಡುವ ವೇಳೆ ವಿದ್ಯಾಧರ್ ಪಟೇಲ್ ಬೌಲಿಂಗ್‌ನಲ್ಲಿ ಶ್ರೇಯಸ್ ಗೋಪಾಲ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.
ನಂತರ ಬಂದ ಬ್ಯಾಟರ್‌ಗಳು ಆರಂಭಿಕ ಆಟಗಾರರನ್ನೇ ಹಿಂಬಾಲಿಸುತ್ತಾ ಪೆವಿಲಿಯನ್ ಹಾದಿ ಹಿಡಿದರು. ಈ ಹಂತದಲ್ಲಿ ನಾಯಕ ಶಾರುಖ್ ಖಾನ್ 19 ರನ್ ಬಾರಿಸಿ ತಂಡಕ್ಕೆ ಆಸರೆಯಾಗುವ ಭರವಸೆ ನೀಡಿದ್ದರು. ಆದರೆ ಮನೋಜ್ ಭಾಂಡಗೆ ಎಸೆತ ಗುರುತಿಸುವಲ್ಲಿ ವಿಫಲರಾದ ಶಾರುಖ್ ವಿಕೆಟ್ ಒಪ್ಪಿಸಿದರು.
ಕರ್ನಾಟಕ ಬೌಲರ್‌ಗಳ ಯಶಸ್ವಿ ಬೌಲಿಂಗ್‌ನಿಂದ ತಮಿಳುನಾಡು ತಂಡ 20 ಓವರ್‌ಗಳಲ್ಲಿ 90 ರನ್‌ಗೆ ಆಲೌಟ್ ಆಯಿತು. ಕರ್ನಾಟಕ ಪರ ವಿ.ಕೌಶಿಕ್ 4 ಓವರ್‌ಗಳಲ್ಲಿ 10 ರನ್ ನೀಡಿ 3 ವಿಕೆಟ್ ಪಡೆದರೆ, ಮನೋಜ್ ಭಾಂಡ ಕೂಡ 3 ವಿಕೆಟ್ ಕಬಳಿಸಿದರು.
ಸುಲಭ ಗುರಿ ಬೆನ್ನತ್ತಿದ ಕರ್ನಾಟಕ ತಂಡದ ಆರಂಭಿಕ ಬ್ಯಾಟರ್‌ಗಳಾದ ಮನೀಶ ಪಾಂಡೆ 42 (29ಎಸೆತ), ಹಾಗೂ ಮಯಾಂಕ್ ಅಗರ್‌ವಾಲ್ 30 (27 ಎಸೆತ) ರನ್ ಗಳಿಸುವ ಮೂಲಕ ಕೇವಲ 11.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 93 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…