ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಎ. ರಘುರಾಮ್ ಭಟ್ ಅವರು ಸ್ಪರ್ಧಿಸುವ ಮೂಲಕ ನಾಮಪತ್ರವನ್ನು ಸಲ್ಲಿಸಿದ್ದಾರೆ.
ನವೆಂಬರ್ 20ರಂದು ನಿಗದಿಯಾಗಿರುವ ಕೆಎಸ್‌ಸಿಎ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದವರ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
1980 ರಿಂದ 1993ರವರೆಗೆ ರಘುರಾಮ್ ಭಟ್ ಅವರು ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದಾರೆ. ಭಾರತ ತಂಡವನ್ನು ಎರಡು ಟೆಸ್ಟ್ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದರು. ಕರ್ನಾಟಕ ತಂಡದಲ್ಲಿ ಎಡಗೈ ಸ್ಪಿನ್ನರ್ ಆಗಿ ಮಿಂಚಿದ್ದ ಅವರು 82 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿ 374 ವಿಕೆಟ್‌ಗಳನ್ನು ಗಳಿಸಿದ್ದಾರೆ. ನಿವೃತ್ತಿಯ ನಂತರ ಅಂಪೈರ್, ಕೋಚ್ ಮತ್ತು ರಾಜ್ಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 64 ವರ್ಷ ರಘುರಾಮ್, ಉಪಾಧ್ಯಕ್ಷ ಸ್ಥಾನಕ್ಕೂ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಹಿಂಪಡೆಯಲು ಬುಧವಾರ ಕೊನೆಯ ದಿನವಾಗಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…