ಮುಂಬೈ : ಐಸಿಸಿ ಏಕದಿನ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುತ್ತಿರುವ ಭಾರತ ತಂಡ ಸೆಮಿ ಫೈನಲ್ ತಲುಪಿದೆ. ಲೀಗ್ ಹಂತದಲ್ಲಿ ತಾನಾಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಸೆಮಿಸ್‌ಗೆ ಎಂಟ್ರಿಕೊಟ್ಟಿದೆ.
ಇದರ ಬೆನ್ನಲ್ಲೇ ಎಡಗೈ ಸ್ಪಿನ್ನರ್ ಕುಲ್ದೀಪ್ ಯಾದವ್ ಶಾಕಿಂಗ್ ಹೇಳಿಕೆ ನೀಡಿದ್ದು, ಭಾರತೀಯ ಬೌಲರ್‌ಗಳು ಸೆಮಿಸ್‌ನಲ್ಲಿ ಎದುರಿಸಬಹುದಾದ ಹಲವು ವಿಶಿಷ್ಠ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ.
ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಇದೇ ನ.15ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಬ್ಯಾಟಿಂಗ್ ಹೆಚ್ಚು ಪ್ರಿಯವಾದ ಈ ಪಿಚ್‌ನಲ್ಲಿ ಬೌಲರ್‌ಗಳು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಡಗೈ ವೇಗಿ ಅಭಿಪ್ರಾಯಪಟ್ಟಿದ್ದಾರೆ.
ವಾಂಖೆಡೆ ಸ್ಟೇಡಿಯಂ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿರುವ ಕುಲ್ದೀಪ್, ಇದು ಬೌಲಿಂಗ್ ಮಾಡಲು ಕಷ್ಟಕರವಾದ ಪಿಚ್ ಆಗಿದೆ. ಬ್ಯಾಟರ್‌ಗಳು ಇಲ್ಲಿ ಹೆಚ್ಚಾಗಿ ಪ್ರಾಬಲ್ಯ ಸಾಧಿಸಲಿದ್ದಾರೆ. ಓಡಿಐ ಟೂರ್ನಿಯಾಗಿರುವುದರಿಂದ ಲಯಕ್ಕೆ ಮರಳಲು ಸಾಕಷ್ಟು ಸಮಯ ಸಿಗಲಿದೆ. ಆದರೆ ಎದುರಾಳಿ ಮೇಲೆ ಹಿಡಿತ ಸಾಧಿಸಿ ಆಟ ಜಯಿಸಲು ಆರಂಭದಲ್ಲಿ ಒಂದೆರಡು ವಿಕೆಟ್‌ಗಳ ಅವಶ್ಯಕತೆಯಿದೆ ಎಂದು ವಿವರಿಸಿದ್ದಾರೆ.
ಭಾರತ 2019ರ ವಿಶ್ವಕಪ್ ಟೂರ್ನಿಯ ಸೆಮಿಸ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳಲು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಭಾರತದ ವಿರುದ್ಧ 18 ರನ್‌ಗಳ ಜಯ ದಾಖಲಿಸಿತ್ತು. ಮತ್ತು ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ನ್ಯೂಜಿಲ್ಯಾಂಡ್ ಸೊಲನುಭವಿಸಿತ್ತು.
ನವೆಂಬರ್ 15ರಂದು ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಎದುರಾಗಲಿವೆ. ಈ ಪಂದ್ಯವು ಮುಂಬೈನ ವಾಂಖೆಡೆ ಸಸ್ಟೇಡಿಯಂನಲ್ಲಿ ಮದ್ಯಾಹ್ನ 2 ಗಂಡೆಗೆ ನಡೆಯಲಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…