ಕ್ರೀಡೆ

ಕುಲ್‌ದೀಪ್‌ ಯಾದವ್‌ಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು: ಅನಿಲ್ ಕುಂಬ್ಳೆ!

ಹೊಸದಿಲ್ಲಿ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿರುವ ಕುಲ್‌ದೀಪ್‌ ಯಾದವ್ ಭವಿಷ್ಯದಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆಂದು ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಭವಿಷ್ಯ ನುಡಿದಿದ್ದಾರೆ.

ಚೈನಾಮನ್‌ ಖ್ಯಾತಿಯ ಕುಲ್‌ದೀಪ್‌ ಯಾದವ್ ಭಾರತ ತಂಡದ ಪರ 8 ಟೆಸ್ಟ್ ಪಂದ್ಯಗಳಿಂದ 34 ವಿಕೆಟ್ ಪಡೆದಿದ್ದು, ಇದರಲ್ಲಿ ಮೂರು ಬಾರಿ 5 ವಿಕೆಟ್ ಸಾಧನೆ ಮಾಡಿದ್ದಾರೆ. ಆದರೆ, ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಆದರೆ, ಏಕದಿನ ಹಾಗೂ ಟಿ20 ಪಂದ್ಯಗಳಲ್ಲಿ ಸ್ಥಾನ ಪಡೆದಿದ್ದಾರೆ.

ಭಾರತ ಟೆಸ್ಟ್ ತಂಡಕ್ಕೆ ಕುಲ್‌ದೀಪ್‌ ಯಾದವ್ ಮಹತ್ವದ ಬಗ್ಗೆ ಕನ್ನಡಿಗ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಜಿಯೋ ಸಿನಿಮಾ ಜೊತೆ ಮಾತನಾಡಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಕುಲ್‌ದೀಪ್‌ ಯಾದವ್ ಟೆಸ್ಟ್‌ಗೆ ಮರಳುತ್ತಾರೆ: ಕುಂಬ್ಳೆ : “ಕುಲ್‌ದೀಪ್‌ ಯಾದವ್ ವಿಶ್ವ ದರ್ಜೆಯ ಸ್ಪಿನ್ನರ್‌ ಆಗಿದ್ದು, ಟೆಸ್ಟ್ ಕ್ರಿಕೆಟ್‌ಗೆ ಖಂಡಿತಾ ಮರಳಲಿದ್ದಾರೆ. ಲೆಗ್ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಸಂಘಟಿಸಿ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿ ಹಾಕಲಿದ್ದಾರೆ. ಹಾಗಾಗಿ ತಂಡದಲ್ಲಿ ಲೆಗ್ ಸ್ಪಿನ್ನರ್‌ಗಳನ್ನು ಬೆಳೆಸಬೇಕು, ಅವಕಾಶ ಸಿಕ್ಕಿದಾಗಲೆಲ್ಲ ಅವರನ್ನು ತಂಡದೊಳಗೆ ಕರೆ ತರಬೇಕು,” ಎಂದು ಸ್ಪಿನ್ ದಿಗ್ಗಜ ಹೇಳಿದ್ದಾರೆ.

“ಕುಲ್‌ದೀಪ್ ಯಾದವ್ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ತುಂಬಾ ಒಳ್ಳೆಯ ಸ್ಪಿನ್ನರ್ ಆಗಿದ್ದಾರೆ. ಅವರಿಗೆ ಅವಕಾಶ ನೀಡಿದಾಗಲೆಲ್ಲ ಉತ್ತಮ ಪ್ರದರ್ಶನ ತೋರಿದ್ದಾರೆ. ವೈಟ್ ಬಾಲ್ ಸ್ವರೂಪದಲ್ಲಿಯೂ ಹಲವರು ಚೈನಾಮನ್‌ ಶೈಲಿಯನ್ನು ಹೊಂದಿದ್ದಾರೆ. ಆದರೆ, ಟೆಸ್ಟ್ ಸ್ವರೂಪದಲ್ಲಿ ಲೆಗ್‌ ಸ್ಪಿನ್ನರ್‌ಗಳ ಕೊರತೆ ಕಾಣಿಸುತ್ತಿದೆ,” ಎಂದು ಭಾರತ ತಂಡದ ಮಾಜಿ ನಾಯಕ ತಿಳಿಸಿದ್ದಾರೆ.

ಕುಲ್‌ದೀಪ್‌ ಯಾದವ್‌ ಅವರನ್ನು 4ನೇ ಸ್ಪಿನ್ನರ್‌ ಆಗಿ ಪರಿಗಣಿಸಬೇಕು: ರವಿಚಂದ್ರನ್ ಅಶ್ವಿನ್ ಅವರು ವೆಸ್ಟ್ ಇಂಡೀಸ್ ವಿರುದ್ಧ ವಿಂಡ್ಸರ್ ಪಾರ್ಕ್‌ನಲ್ಲಿ 12 ವಿಕೆಟ್ ಪಡೆದು ಭಾರತಕ್ಕೆ ಇನಿಂಗ್ಸ್ ಹಾಗೂ 141 ರನ್ ಗೆಲುವು ತಂದುಕೊಟ್ಟಿದ್ದಾರೆ. ಟೀಮ್ ಇಂಡಿಯಾದಲ್ಲಿ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್ ಅವರೊಂದಿಗೆ ಕುಲ್‌ದೀಪ್‌ ಯಾದವ್ ಅವರನ್ನು ನಾಲ್ಕನೇ ಸ್ಪಿನ್ನರ್ ಆಗಿ ಟೆಸ್ಟ್ ತಂಡದಲ್ಲಿ ಪರಿಗಣಿಸಬೇಕು ಎಂದು ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ.

“ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರು ಟೀಮ್ ಇಂಡಿಯಾದಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇಬ್ಬರೂ ವಿಶ್ವದ ಶ್ರೇಷ್ಠ ಬೌಲರ್‌ಗಳಾಗಿದ್ದು, ಅಕ್ಷರ್ ಪಟೇಲ್ ಮೂರನೇ ಸ್ಪಿನ್ನರ್ ಆಯ್ಕೆಯಾಗಿದ್ದಾರೆ. ಈ ಮೂವರು ಸ್ಪಿನ್ನರ್‌ಗಳೊಂದಿಗೆ ಕುಲ್ದೀಪ್‌ ಯಾದವ್ ಅವರನ್ನು ಅವಕಾಶ ಸಿಕ್ಕಾಗ ತಂಡದಲ್ಲಿ ಸ್ಥಾನ ಕಲ್ಪಿಸಬೇಕು,” ಎಂದು ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ಹೇಳಿದ್ದಾರೆ.

ಮೊದಲನೇ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ ಟೆಸ್ಟ್‌ ಸರಣಿಯಲ್ಲಿ 1-0 ಮುನ್ನಡೆ ಪಡೆದಿದ್ದು, ಜುಲೈ 20 ರಿಂದ ಫೋರ್ಟ್ ಆಫ್ ಸ್ಪೇನ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆರಂಭವಾಗುವ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡದ ಸವಾಲನ್ನು ಎದುರಿಸಲಿದೆ.

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

8 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

9 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

9 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

10 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

11 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

11 hours ago