ಕ್ರೀಡೆ

ಡೇವಿಸ್ ಕಪ್‍ನಲ್ಲಿ ಕೊಡಗಿನ ಕುವರ: ವರ್ಲ್ಡ್‌‌ ಕಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡ ಭಾರತ

ಕೊಡಗು: ಅಂತರಾಷ್ಟ್ರೀಯ ಟೆನ್ನಿಸ್ ಜಗತ್ತಿನ ವರ್ಲ್ಡ್‌‌ ಕಪ್ ಎಂದೇ ಹೆಸರು ಪಡೆದಿರುವ ಟೆನ್ನಿಸ್ ಟೀಮ್ ಇವೆಂಟ್ ಪ್ರತಿಷ್ಠಿತ ಡೇವಿಸ್ ಕಪ್‍ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 4-0 ರಿಂದ ಸೋಲಿಸಿ ವರ್ಲ್ಡ್‌‌ ಕಪ್ ಗ್ರೂಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.

28ರ ಹರೆಯದ ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ತಂಡದ ವಿಜಯದಲ್ಲಿ ಭಾಗಿಯಾಗಿದ್ದಾರೆ.

60 ವರ್ಷಗಳ ಬಳಿಕ ಭಾರತ ಡೇವಿಸ್ ಕಪ್ ತಂಡವು ಪಾಕಿಸ್ತಾನಕ್ಕೆ ತೆರಳಿದ್ದು, ಆತಿಥೇಯ ತಂಡವನ್ನು ಭಾನುವಾರ 4 ಪಂದ್ಯಗಳಲ್ಲೂ ಸೋಲಿಸಿ ಡೇವಿಸ್ ಕಪ್‍ನ ವಲ್ರ್ಡ್ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿದೆ.

ಇದರಲ್ಲಿ 4ನೇ ಪಂದ್ಯದ ಸಿಂಗಲ್ಸ್‌ ವಿಭಾಗದಲ್ಲಿ, ಕೊಡಗಿನ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಎದುರಾಳಿ ಮಹಮ್ಮದ್ ಶೋಯಬ್ ಅವರನ್ನು 6-3, 6-4ರ ನೇರ ಸೆಟ್‍ಗಳಲ್ಲಿ ಮಣಿಸಿ ತಂಡದ ಗೆಲುವಿಗೆ ಕೈ ಜೋಡಿಸಿದರು.

ಡಬಲ್ಸ್ ವಿಭಾಗದಲ್ಲಿ ಭಾರತದ ಯುಕಿ ಬಾಂಬ್ರಿ – ಸಾಕೆತ್ ಮೈನೆನಿ ಜೋಡಿ ಗೆಲುವು ಸಾಧಿಸಿದರು. ಸಿಂಗಲ್ಸ್‍ನಲ್ಲಿ ರಾಮ್ ಕುಮಾರ್ ರಾಮನಾಥಾನ್, ಎನ್.ಶ್ರೀರಾಮ್ ಬಾಲಾಜಿ ಹಾಗೂ ಮೊದಲ ಬಾರಿ ಡೇವಿಸ್ ಕಪ್ ಆಡುತ್ತಿರುವ ನಿಕ್ಕಿ ಪೂಣಚ್ಚ ಅವರು ಗೆಲುವಿನ ನಗೆ ಬೀರಿದರು.

ಮೂಲತ ಮಡಿಕೇರಿ ತಾಲೂಕಿನ ಕಕ್ಕಬ್ಬೆಯವರಾದ ಕಲಿಯಂಡ ನಿಕ್ಕಿ ಪೂಣಚ್ಚ ಅವರು ಆಂಧ್ರದ ಅನಂತಪುರದಲ್ಲಿ ನೆಲೆಸಿರುವ ಕಲಿಯಂಡ ಪೂಣಚ್ಚ ಹಾಗೂ ವೀಣಾ ದಂಪತಿಯ ಪುತ್ರ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago