ಕ್ರೀಡೆ

ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌

ಪ್ಯಾರಿಸ್:‌ ಭಾರತದ ಲಕ್ಷ್ಯ ಸೇನ್‌ ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಸ್ಪರ್ಧೆಯಲ್ಲಿ ಸ್ವದೇಶದ ಪ್ರಣಯ್‌ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

22 ವರ್ಷ ವಯಸ್ಸಿನ ಲಕ್ಷ್ಯ ಸೇನ್‌ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಎಂಟರ ಘಟ್ಟ ಪ್ರವೇಶಿಸಿದ ಭಾರತದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾದರು.

ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ನಲ್ಲಿ ಸೇನ್‌ ಅವರು, 21-12, 21-6ರಿಂದ ವಿಶ್ವದ 13ನೇ ಕ್ರಮಾಂಕದ ಪ್ರಣಯ್‌ ಅವರನ್ನು ಸೋಲಿಸಿದರು. ನಿಖರ ಸರ್ವ್‌, ಅದ್ಭುತ ಫೋರ್‌ ಹ್ಯಾಂಡ್‌ ಆಟದ ಮೂಲಕ ಅವರು ಕೇವಲ 30 ನಿಮಿಷದಲ್ಲಿ ನಿರಾಯಾಸವಾಗಿ ಗೆಲುವನ್ನು ದಕ್ಕಿಸಿಕೊಂಡರು.

ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಸೇನ್‌ ಅವರು, ಫೈನಲ್‌ನಲ್ಲಿ 12ನೇ ಶ್ರೇಯಾಂಕದ ಚೌ ಟಿಯೆನ್‌ ಚೆಮ್‌ ಅವರನ್ನು ಎದುರಿಸುವರು.

 

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

2 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

3 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

3 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

3 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

3 hours ago