ಕ್ರೀಡೆ

ಕಾಲು ಮುರಿದಿದ್ದರೂ ಕಾಮನ್ವೆಲ್ತ್ ಚಿನ್ನ ಗೆದ್ದೆ: ಸಿಂಧು

ಬೆಂಗಳೂರು: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ವಿಶ್ವ ಚಾಂಪಿಯನ್, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಕಾಲು ಮುರಿದಿದ್ದರೂ ಚಿನ್ನ ಗೆದ್ದಿದ್ದು ಹೇಗೆ ಎನ್ನುವ ರೋಚಕ ಸಂಗತಿ ಬಿಚ್ಚಿಟ್ಟಿದ್ದಾರೆ. ಛಲವಿದ್ದರೆ ನೋವಿನಲ್ಲೂ ಹೋರಾಟ ನಡೆಸಲು ಸಾಧ್ಯವಿದೆ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಗುಜರಾತ್‌ನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಆಡಲು ಕಣಕ್ಕಿಳಿಯದಿದ್ದರೂ ಕ್ರೀಡಾಕೂಟ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಸಿಂಧು, ಬ್ಯಾಡ್ಮಿಂಟನ್ ಆಟಗಾರರು ಮಾತ್ರವಲ್ಲದೇ ಅನೇಕ ಬೇರೆ ಬೇರೆ ಕ್ರೀಡೆಗಳ ಆಟಗಾರರ ಜತೆ ತಮ್ಮ ಮಾತನಾಡಿ ತಮ್ಮ ಅನುಭವ ಹಂಚಿಕೊಂಡರು.

ಈ ಬಗ್ಗೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಸಿಂಧು ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ‘ನ್ಯಾಷನಲ್ ಗೇಮ್ಸ್‌ನಲ್ಲಿ ಆಡಬೇಕು ಎಂದು ಬಹಳ ಆಸೆ ಇತ್ತು. ಆದರೆ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಕಣಕ್ಕಿಳಿದಿದ್ದರೆ ಗಾಯದ ಪ್ರಮಾಣ ಹೆಚ್ಚುವ ಸಾಧ್ಯತೆ ಇತ್ತು’ ಎಂದರು. ‘ಈ ಕ್ರೀಡಾಕೂಟವು ಅನೇಕ ಯುವ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯಾಗಲಿದೆ. ಅಂತಾರಾಷ್ಟ್ರೀಯ ಕ್ರೀಡಾಪಟುಗಳ ಜೊತೆ ಸ್ಪರ್ಧಿಸುವ ಅವಕಾಶ ಸಿಗುವ ಕಾರಣ ಉತ್ಕೃಷ್ಟ ಮಟ್ಟದಲ್ಲಿ ಸ್ಪರ್ಧೆ ಹೇಗಿರಲಿದೆ. ತಾವೆಷ್ಟು ಸುಧಾರಣೆ ಕಾಣಬೇಕು ಎನ್ನುವುದು ಯುವ ಕ್ರೀಡಾಪಟುಗಳಿಗೆ ತಿಳಿಯಲಿದೆ’ ಎಂದು ಹೇಳಿದರು.

ತಮ್ಮ ಕಾಮನ್‌ವೆಲ್ತ್ ಕ್ರೀಡಾಕೂಟದ ಚಿನ್ನದ ಜರ್ನಿ ಬಗ್ಗೆ ಮಾತನಾಡಿದ ಸಿಂಧು, ‘ಕ್ವಾರ್ಟರ್ ಫೈನಲ್ ತಲುಪಿದ ಸಂದರ್ಭದಲ್ಲಿ ಎಡ ಮೊಣಕಾಲಿನ ನೋವು ಹೆಚ್ಚಾಯಿತು. ನನಗೆ ಗಾಯದ ಪ್ರಮಾಣ ದೊಡ್ಡದಿದೆ ಎಂದು ಗೊತ್ತಾಗಿರಲಿಲ್ಲ. ಹಿಂದಿನ ಆವೃತ್ತಿಗಳಲ್ಲಿ ಕಂಚು ಹಾಗೂ ಬೆಳ್ಳಿ ಗೆದ್ದಿದ್ದ ನನಗೆ ಚಿನ್ನದ ಪದಕವೇ ಬೇಕಿತ್ತು. ಅದೇ ಛಲದೊಂದಿಗೆ ಆಡಿ ಗೆದ್ದೆ. ಭಾರತಕ್ಕೆ ವಾಪಸಾದ ಬಳಿಕ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು. ಆಗ ಸಣ್ಣ ಮಟ್ಟದ ಮುರಿತವಾಗಿರುವುದು ಕಂಡುಬಂತು. ಈಗ ಚೇತರಿಕೆ ಕಾಣುತ್ತಿದ್ದೇನೆ. ಆದಷ್ಟು ಬೇಗ ಅಂಕಣಕ್ಕೆ ಮರಳುವ ವಿಶ್ವಾಸವಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2022ರಲ್ಲಿ ಕಾಮನ್‌ವೆಲ್ತ್ ಚಿನ್ನ, 3 ಪ್ರಶಸ್ತಿಗಳನ್ನು ಗೆದ್ದಿರುವ ಸಿಂಧು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದರಂತೆ. ಪ್ರಮುಖವಾಗಿ ತಮ್ಮ ನೆಚ್ಚಿನ ಎದುರಾಳಿ ಜಪಾನ್‌ನ ಅಕನೆ ಯಮಗುಚಿ ವಿರುದ್ಧ ಆಡಲು ಎದುರು ನೋಡುತ್ತಿದ್ದಾಗಿ ಅವರು ಹೇಳಿಕೊಂಡರು. ಆದರೆ ಗಾಯದ ಕಾರಣ ಸಿಂಧು ವಿಶ್ವ ಚಾಂಪಿಯನ್‌ಶಿಪ್‌ಗೆ ಗೈರಾದರು. 2019ರಲ್ಲಿ ವಿಶ್ವ ಚಾಂಪಿಯನ್ ಆಗಿದ್ದ ಸಿಂಧು, ಈ ವರೆಗೂ ಒಟ್ಟು 5 ಪದಕ ಗೆದ್ದಿದ್ದಾರೆ.

ಗುಜರಾತ್‌ನಲ್ಲಿ ಮೂಲಸೌಕರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಂಧು, ಬ್ಯಾಡ್ಮಿಂಟನ್ ಅಂಕಣಗಳು ವಿಶ್ವ ದರ್ಜೆಯದ್ದಾಗಿವೆ. ಜಾಗತಿಕ ಮಟ್ಟದ ಪಂದ್ಯಾವಳಿಗಳನ್ನು ಗುಜರಾತ್ ಆಯೋಜಿಸುವ ಸಾಮರ್ಥ್ಯ ಹೊಂದಿದೆ ಎಂದು ಅಭಿಪ್ರಾಯಪಟ್ಟರು.

andolanait

Recent Posts

‘ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಇಲ್ಲ

65 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹ; ಜಿಲ್ಲೆಯಾದ್ಯಂತ ಒಟ್ಟು 2,12,504 ಟನ್‌ ಮೇವು ಲಭ್ಯ - ನವೀನ್ ಡಿಸೋಜ ಮಡಿಕೇರಿ…

13 mins ago

ಏಳೆಂಟು ವರ್ಷ ಹಿಂದೆಯೇ ಎಚ್‌ ಪಿವಿ ಲಸಿಕೆ ಆರಂಭಿಸಿದ ವೈದ್ಯ!

ಪುರುಷರೂ ಎಚ್‌ಪಿವಿ ಲಸಿಕೆ ಪಡೆಯುವುದು ಸುರಕ್ಷಿತ: ಡಾ.ಯೋಗೇಂದ್ರಕುಮಾರ್ ಸಲಹೆ • ಹೇಮಂತ್‌ಕುಮಾ‌ರ್‌ ಮಂಡ್ಯ :  ಹೆಣ್ಣು ಮಕ್ಕಳನ್ನು ಬಾಧಿಸುತ್ತಿರುವ ಗರ್ಭಕಂಠ…

22 mins ago

ಕಾಳು ಮೆಣಸು ಕಳ್ಳತನ; ಆರೋಪಿಗಳ ಬಂಧನ

ತನಿಖೆ ವೇಳೆ ಮತ್ತಷ್ಟು ಕಳ್ಳತನ ಮಾಡಿದ ಪ್ರಕರಣಗಳು ಬೆಳಕಿಗೆ ವಿರಾಜಪೇಟೆ : ಕಾಫಿ ಕಣದಲ್ಲಿ ಒಣಗಿಸಲು ಇಟ್ಟಿದ ಕಾಳು ಮೆಣಸು…

32 mins ago

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

2 hours ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago