ಕ್ರೀಡೆ

ಲೆಜೆಂಡ್ಸ್ ಪ್ರೋ T20 ಲೀಗ್ : ದಿನೇಶ್ ಕಾರ್ತಿಕ್, ಶಾನ್ ಮಾರ್ಶ್ ಸೇರಿದಂತೆ ಐವರು ದಿಗ್ಗಜರು ಲೀಗ್‌ಗೆ ಸೇರ್ಪಡೆ!

ಗೋವಾ : ಲೆಜೆಂಡ್ಸ್ ಪ್ರೋ T20 ಲೀಗ್ ತನ್ನ ಮುಂದಿನ ಆಟಗಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಾರಿ ಲೀಗ್‌ಗೆ ದಿನೇಶ್ ಕಾರ್ತಿಕ್, ಶಾನ್ ಮಾರ್ಶ್, ಅಮಿತ್ ಮಿಶ್ರಾ, ವಿನಯ್ ಕುಮಾರ್ ಮತ್ತು ಇಂಗ್ಲೆಂಡ್‌ನ ಪ್ರಸಿದ್ಧ ಎಡಗೈ ಸ್ಪಿನ್ನರ್ ಮಾಂಟಿ ಪನೇಸರ್ ಸೇರಿಕೊಂಡಿದ್ದು, ಗೋವಾದಲ್ಲಿ ನಡೆಯಲಿರುವ ಈ ಲೀಗ್‌ನಲ್ಲಿ ಅವರು ಭಾಗವಹಿಸಲಿದ್ದಾರೆ.

ಭಾರತದ ಪ್ರಸಿದ್ಧ ಫಿನಿಷರ್‌ಗಳಲ್ಲೊಬ್ಬರಾದ ದಿನೇಶ್ ಕಾರ್ತಿಕ್ 2018ರ ನಿಧಾಹಾಸ್ ಟ್ರೋಫಿ ಫೈನಲ್‌ನಲ್ಲಿ ಆಡಿದ ನೆನಪಿನ ಪ್ರದರ್ಶನಕ್ಕಾಗಿ ಅಭಿಮಾನಿಗಳ ಮನಸ್ಸಿನಲ್ಲಿ ಇನ್ನೂ ಜೀವಂತವಾಗಿದ್ದಾರೆ. 2024ರಲ್ಲಿ ತಮ್ಮ T20 ವೃತ್ತಿಜೀವನವನ್ನು ಮುಗಿಸಿದ ಅವರು ಮತ್ತೆ ಮೈದಾನಕ್ಕೆ ಮರಳುತ್ತಿರುವುದು ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ.

ಈ ಬಗ್ಗೆ ಮಾತನಾಡಿದ ದಿನೇಶ್ ಕಾರ್ತಿಕ್ ಹೇಳಿದರು: “ಭಾರತವನ್ನು ಪ್ರತಿನಿಧಿಸಿರುವ ವರ್ಷಗಳು ನನಗೆ ಅನೇಕ ಸ್ಮರಣೀಯ ಕ್ಷಣಗಳನ್ನು ಕೊಟ್ಟಿವೆ. ಮತ್ತೆ ಆಡುವ ಅವಕಾಶ ಸಿಕ್ಕಿರುವುದು ನನಗೆ ತುಂಬಾ ವಿಶೇಷ. ಲೆಜೆಂಡ್ಸ್ ಪ್ರೋ T20 ಲೀಗ್ ನಮ್ಮಂತಹ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಸೇರಿಸುತ್ತಿದೆ. ಗೋವಾದಂತಹ ಅದ್ಭುತ ಸ್ಥಳದಲ್ಲಿ ಮತ್ತೆ ಅಭಿಮಾನಿಗಳ ಎದುರು ಆಡುವುದಕ್ಕಾಗಿ ನಾನು ತುಂಬಾ ಉತ್ಸುಕರಾಗಿದ್ದೇನೆ ಎಂದಿದ್ದಾರೆ.

ಇದನ್ನು ಓದಿ: ಗೋವಾದಲ್ಲಿ ರಂಗೇರಲಿದೆ ಲೆಜೆಂಡ್ಸ್‌ ಪ್ರೋ T20 ಲೀಗ್‌ : ಆಸಿಸ್‌ ಕ್ರಿಕೆಟಿಗ ವಾಟ್ಸನ್‌ ಹೇಳಿದ್ದೇನು?

ಭಾರತದ ಪ್ರೀಮಿಯರ್ T20 ಲೀಗ್‌ನ ಮೊದಲ ‘ಆರೇಂಜ್ ಕ್ಯಾಪ್’ ವಿಜೇತರಾಗಿರುವ ಶಾನ್ ಮಾರ್ಶ್ ಹಲವು ವರ್ಷಗಳ ಬಳಿಕ ಮತ್ತೆ ಭಾರತಕ್ಕೆ ಮರಳಲಿದ್ದಾರೆ. ಮಾರ್ಶ್ ಮಾತನಾಡಿ “ಬಹಳ ವರ್ಷಗಳ ನಂತರ ಭಾರತಕ್ಕೆ ಮರಳುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಲೆಜೆಂಡ್ಸ್ ಪ್ರೋ T20 ಲೀಗ್ ಮತ್ತೆ ಇಲ್ಲಿ ಆಡಲು ಅವಕಾಶ ನೀಡಿರುವುದು ವಿಶೇಷ’ ಎಂದಿದ್ದಾರೆ.

ಭಾರತದ ಅತ್ಯುತ್ತಮ ಲೆಗ್-ಸ್ಪಿನ್ನರ್‌ಗಳಲ್ಲಿ ಒಬ್ಬರಾದ ಅಮಿತ್ ಮಿಶ್ರಾ, ಭಾರತದ ಪ್ರಮುಖ T20 ಟೂರ್ನಿಯಲ್ಲಿ ಮೂರು ವಿಭಿನ್ನ ತಂಡಗಳ ಪರವಾಗಿ ಮೂರು ಹ್ಯಾಟ್-ಟ್ರಿಕ್‌ಗಳನ್ನು ಪಡೆದ ಏಕೈಕ ಬೌಲರ್. ಈ ಬಗ್ಗೆ ಮಾತನಾಡಿದ ಅವರು “25 ವರ್ಷಗಳ ವೃತ್ತಿಜೀವನದ ನಂತರ ಇದು ನನ್ನ ಕ್ರಿಕೆಟ್‌ನ ಎರಡನೇ ಇನ್ನಿಂಗ್ಸ್ ಎಂಬ ಭಾವನೆ ಇದೆ. ದಿಗ್ಗಜರ ಜೊತೆ ಮತ್ತೆ ಸ್ಪರ್ಧಿಸುವ ಅವಕಾಶ ದೊರೆತಿರುವುದು ಅತ್ಯಂತ ಸಂತಸ ತಂದಿದೆ ಎಂದಿದ್ದಾರೆ.
ವಿನಯ್ ಕುಮಾರ್ ಕೂಡ ಈ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದು“ಲೆಜೆಂಡ್ಸ್ ಪ್ರೋ T20 ಲೀಗ್‌ನ ಭಾಗವಾಗಿರುವುದು ನನಗೆ ನಿಜವಾದ ಸಂತೋಷ” ಎಂದಿದ್ದಾರೆ.

ಇಂಗ್ಲೆಂಡ್‌ನ ಅತ್ಯಂತ ಪ್ರೀತಿಸಲ್ಪಡುವ ಎಡಗೈ ಸ್ಪಿನ್ನರ್‌ಗಳಲ್ಲಿ ಒಬ್ಬರಾದ ಮಾಂಟಿ ಪನೇಸರ್ ಕೂಡ ಈ ಲೀಗ್‌ನಲ್ಲಿ ಕಾಣಿಸಿಕೊಳ್ಳಲಿದ್ದು, “ಭಾರತದಲ್ಲಿ ಆಡುವುದು ಯಾವಾಗಲೂ ಅದ್ಭುತ ಅನುಭವ. ಲೆಜೆಂಡ್ಸ್ ಪ್ರೋ T20 ಲೀಗ್‌ನಲ್ಲಿ ಮತ್ತೆ ಮೈದಾನಕ್ಕಿಳಿಯಲು ನಾನು ಕಾತರರಾಗಿದ್ದೇನೆ ಎಂದಿದ್ದಾರೆ.

ಲೆಜೆಂಡ್ಸ್ ಪ್ರೋ T20 ಲೀಗ್‌ನ ಮೊದಲ ಆವೃತ್ತಿ 2026ರ ಜನವರಿ 26ರಿಂದ ಫೆಬ್ರವರಿ 4ರವರೆಗೆ ಗೋವಾದ ಹೊಸ 1919 ಸ್ಪೋರ್ಟ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನೆರವೇರುವಂತೆ ಯೋಜಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

14 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

14 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

15 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

19 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

19 hours ago