ನವದೆಹಲಿ : ಭಾರತವು ಇದೀಗ ಸ್ವಲ್ಪ ಸಮಯದಿಂದ ಸೀಮಿತ ಓವರ್ ಗಳ ಪಂದ್ಯದಲ್ಲಿ ಸಾಮಾನ್ಯ ತಂಡವಾಗಿದೆ. ಕೆಲವು ತಿಂಗಳ ಹಿಂದೆ ಟ್ವೆಂಟಿ-20 ವಿಶ್ವಕಪ್ ಗೆ ಅರ್ಹತೆ ಪಡೆಯುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ ತಂಡದಿಂದ ಭಾರತವು ಇದೀಗ ಸೋತಿದೆ. ನಾವು ಏಕದಿನ ಸರಣಿಯಲ್ಲೂ ಬಾಂಗ್ಲಾದೇಶ ವಿರುದ್ಧ ಸೋತಿದ್ದೇವೆ. ಮೂರ್ಖ ಹೇಳಿಕೆಗಳನ್ನು ನೀಡುವ ಬದಲು ಅವರು ಆತ್ಮಾವಲೋಕನ ಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ ” ಎಂದು ಭಾರತದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ.
ವಿಂಡೀಸ್ ವಿರುದ್ಧ ಟ್ವೆಂಟಿ-20 ಸರಣಿಯಲ್ಲಿ 0-2 ಹಿನ್ನಡೆಯಲ್ಲಿದ್ದ ಭಾರತವು 4ನೇ ಟಿ-20 ಜಯಿಸಿದ ನಂತರ ಸರಣಿಯನ್ನು 2-2ರಿಂದ ಸಮಬಲಗೊಳಿಸಿತು. 5ನೇ ಪಂದ್ಯವನ್ನು ಸೋತು ಸರಣಿಯನ್ನು 3-2 ಅಂತರದಿಂದ ಕಳೆದುಕೊಂಡಿತು. 50 ಓವರ್ ವಿಶ್ವಕಪ್ ಮಾತ್ರವಲ್ಲ ಕಳೆದ ಬಾರಿ ಟಿ-20 ವಿಶ್ವಕಪ್ ಗೂ ಅರ್ಹತೆ ಪಡೆಯಲು ವಿಂಡೀಸ್ ವಿಫಲವಾಗಿದೆ. ಈ ತಂಡದ ವಿರುದ್ಧ ಭಾರತದ ಪ್ರದರ್ಶನ ನೋವುಂಟು ಮಾಡುತ್ತಿದೆ ಎಂದು ಪ್ರಸಾದ್ ಟ್ವೀಟಿಸಿದರು.
ಇತ್ತೀಚೆಗೆ ಹಾರ್ದಿಕ್ ಪಾಂಡ್ಯ ಬಳಗವನ್ನು ಟೀಕಿಸುತ್ತಿರುವ ಪ್ರಸಾದ್ ಇದೀಗ ಸರಣಿ ಸೋತಿರುವುದಕ್ಕೆ ಮತ್ತೆ ಟೀಕಿಸಿದರು.
“ಭಾರತವು ತಮ್ಮ ಕೌಶಲ್ಯವನ್ನು ಸುಧಾರಿಸಿಕೊಳ್ಳಬೇಕಾಗಿದೆ. ಆಟಗಾರರ ಗೆಲ್ಲಬೇಕೆಂಬ ಹಸಿವು ಮತ್ತು ತೀವ್ರತೆಯ ಕೊರತೆ ಇದೆ ಆಗಾಗ್ಗೆ ನಾಯಕನು ಸುಳಿವಿಲ್ಲದಂತೆ ಕಾಣುತ್ತಾನೆ. ಬೌಲರ್ ಗಳು ಬ್ಯಾಟ್ ಮಾಡಲು ಸಾಧ್ಯವಿಲ್ಲ, ಬ್ಯಾಟ್ಸ್ಮನ್ ಗಳು ಬೌಲಿಂಗ್ ಮಾಡಲು ಸಾಧ್ಯವಿಲ್ಲ ಎಂದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…