ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ನ್ಯೂಜಿಲೆಂಡ್ 134 ರನ್‌ಗಳ ಮುನ್ನಡೆ ಕಾಯ್ದುಕೊಂಡು ಭಾರತದ ವಿರುದ್ಧ ಮೇಲುಗೈ ಸಾಧಿಸಿದೆ.
ಮಳೆ ಕಾರಣದಿಂದಾಗಿ ಒಂದು ದಿನ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಿ ಕೇವಲ 46 ರನ್‌ಗಳಿಗೆ ಆಲ್‌ಔಟ್ ಆಗುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿತು. ತವರು ನೆಲದಲ್ಲಿ ಭಾರತ ಟೆಸ್ಟ್ ಇನ್ನಿಂಗ್ಸ್‌ವೊಂದರಲ್ಲಿ ಕಲೆಹಾಕಿದ ಕಡಿಮೆ ಮೊತ್ತ ಎಂಬ ಕೆಟ್ಟ ದಾಖಲೆಯನ್ನು ಬರೆಯಿತು. ಟೀಮ್ ಇಂಡಿಯಾ ವಿರುದ್ಧ ಬೌಲಿಂಗ್‌ನಲ್ಲಿ ಆಕ್ರಮಣಕಾರಿ ಆಟವನ್ನಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ್ದು ಎರಡನೇ ದಿನದಾಟದಂತ್ಯಕ್ಕೆ 50 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿದೆ.
1. ಡಿಸೆಂಬರ್ 17, 2020
ಭಾರತ vs ಆಸ್ಟ್ರೇಲಿಯಾ
ರನ್: 36
ಸ್ಥಳ: ಅಡಿಲೇಡ್
2. ಜೂನ್ 20, 1974
ಭಾರತ vs ಇಂಗ್ಲೆಂಡ್
ರನ್: 42
ಸ್ಥಳ: ಲಾರ್ಡ್ಸ್
3. ಅಕ್ಟೋಬರ್ 17, 2024
ಭಾರತ vs ನ್ಯೂಜಿಲೆಂಡ್
ರನ್: 46
ಸ್ಥಳ: ಚಿನ್ನಸ್ವಾಮಿ, ಬೆಂಗಳೂರು
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…