ಬೆಂಗಳೂರು : ಕರ್ನಾಟಕ ರಾಜ್ಯದ ಕ್ರಿಕೆಟ್ ಲೋಕದಲ್ಲಿ ಪುಟ್ಟ ಪ್ರತಿಭೆಯೊಂದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ.
ನಿತೀಶ್ ಆರ್ಯ ಎಂಬ ಪುಟ್ಟ ಬಾಲಕ ತನ್ನ ಅದ್ಭುತ ಬ್ಯಾಟಿಂಗ್ ನಿಂದ ಮೋಡಿ ಮಾಡಿದ್ದಾನೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸಿರುವ 2023-24 ನೇ ಆವೃತ್ತಿಯ ವಿವಿಧ ಪಂದ್ಯಗಳಲ್ಲಿ 1400 ರನ್ ಗಳಿಸುವ ಮೂಲಕ ಕ್ರಿಕೆಟ್ ಪ್ರಿಯರ ಮನ ಗೆದ್ದಿದ್ದಾರೆ.
ಬೆಂಗಳೂರು ಮೂಲದ ನಿತೀಶ್ ಗೆ ಈಗ 13ರ ಹರೆಯ. ಸಧ್ಯ ಈತ ಕರ್ನಾಟಕ ಕ್ರಿಕೆಟ್ ವಲಯದ ಸೆನ್ಸೆಷನಲ್ ಆಟಗಾರನಾಗಿದ್ದಾರೆ.
ನಿತೀಶ್ ಆರ್ಯ ಪ್ರಸ್ತುತ ರಾಜಾಜಿ ನಗರ ಕ್ರಿಕೆಟರ್ಸ್ ಹಾಗೂ ತಾನೂ ಓದುತ್ತಿರುವ ಬಸವೇಶ್ವರ ನಗರದ ಮ್ಯಾಕ್ಸ್ ಮುಲ್ಲರ್ ಹೈಸ್ಕೂಲ್ ಪರವಾಗಿ ಆಟ ಆಡುತ್ತಿದ್ದಾರೆ.
ಪ್ರಸ್ತುತ ಏಳನೇ ತರಗತಿಯಲ್ಲಿ ಓಡುತ್ತಿರುವ ನಿತೀನ್ ಆರ್ಯ 3 ವರ್ಷದ ಪುಟ್ಟ ಮಗುವಾಗಿದ್ದಾಗಲೇ ಕ್ರಿಕೆಟ್ ಆಡಲು ಆರಂಭಿಸಿದ್ದರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ 16 ವರ್ಷದೊಳಗಿನ KSCA ಕಪ್ ನಲ್ಲಿ ತನ್ನ ಅತ್ಯದ್ಭುತ ಬ್ಯಾಟಿಂಗ್ ಮೂಲಕ ಮೂರು ಶತಕ ಹಾಗೂ ಮೂರು ಅರ್ಧ ಶತಕಗಳೊಂದಿಗೆ 565 ರನ್ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ.
ಅದಷ್ಟೇ ಅಲ್ಲದೆ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸುತ್ತಿರುವ 14 ವರ್ಷದೊಳಗಿನ ಪಂದ್ಯಾವಳಿಯಲ್ಲಿಯೂ ಸಹ ನಿತೀನ್ ಸತತವಾಗಿ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳ ಮನ ಗೆದ್ದಿದ್ದಾರೆ.
ವಿರಾಟ್ ಕೊಹ್ಲಿ ಅವರ ಬಹ ದೊಡ್ಡ ಅಭಿಮಾನಿಯಾಗಿರು ಈ ಪುಟ್ಟ ಪೋರ ಟೀಂ ಇಂಡಿಯಾದ ಆಟಗಾರನಾಗಿ ಮೂರು ಫಾರ್ಮ್ಯಾಟ್ ನಲ್ಲಿ ಮಿಂಚಬೇಕೆಂಬ ಇಂಗಿತವನ್ನು ಹೊಂದಿದ್ದಾರೆ. ನಿತೀಶ್ ಕೇವಲ ಕ್ರಿಕೆಟ್ ನಲ್ಲಿ ಮಾತ್ರವಲ್ಲದೇಓದಿನಲ್ಲಿಯೂ ಕೂಡ ಉತ್ತಮ ಅಂಕ ಗಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…
ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು…
ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್…