ಇಂದು ದೇಶಾದ್ಯಂತ ಐದನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 6 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 49 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಇದರಲ್ಲಿ ಮಹಾರಾಷ್ಟ್ರದ 13 ಕ್ಷೇತ್ರಗಳಿಗೂ ಇಂದೇ ಮತದಾನ ನಡೆಯುತ್ತಿದೆ.
ಮಹಾರಾಷ್ಟ್ರದ ಇಂದು ಗಾಡ್ ಆಫ್ ಕ್ರಿಕೆಟ್ ಸಚಿನ್ ತೆಂಡುಲ್ಕರ್, ಸುನಿಲ್ ಗವಾಸ್ಕರ್ ಅಜಿಂಕೆ ರಹಾನೆ ಸೇರಿದಂತೆ ಹಲವು ಕ್ರಿಕೇಟಿಗರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.
ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರು ತಮ್ಮ ಪುತ್ರ ಅರ್ಜುನ್ ತೆಂಡುಲ್ಕರ್ ಜತೆ ಮುಂಬೈನ ಮತಗಟ್ಟೆಯೊಂದರಲ್ಲಿ ಮತದಾನ ಮಾಡಿದರು.
ದಕ್ಷಿಣ ಮುಂಬೈನ ವರ್ಲಿ ಯಲ್ಲಿ ಮಾಜಿ ಕ್ರಿಕೇಟಿಗ ಸುನೀಲ್ ಗವಾಸ್ಕರ್ ಮತದಾನ ಮಾಡಿದರು. ಬಳಿಕ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಸೂಚಿಸಿದರು.
ಅಜಿಂಕೆ ರಹಾನೆ ತಮ್ಮ ಪತ್ನಿಯೊಂದಿಗೆ ಬಂದು ಮತದಾನ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಸೂರ್ಯಕುಮಾರ್ ಯಾದವ್ ಕೂಡಾ ಮತದಾನ ಮಾಡಿ ಕಡ್ಡಾಯವಾಗಿ ಮತದಾನ ಮಾಡುವಂತೆ ಕೋರಿದ್ದಾರೆ.
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…