ಶ್ರೀಲಂಕಾ : ಲಂಕಾ ಪ್ರೀಮಿಯರ್ ಲೀಗ್ನಲ್ಲಿ ಬಿ-ಲವ್ ಕ್ಯಾಂಡಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಡಂಬುಲ್ಲಾ ಔರಾ ಹಾಗೂ ಬಿ-ಲವ್ ಕ್ಯಾಂಡಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಡಂಬುಲ್ಲಾ ಔರಾ ಮೊದಲು ಬ್ಯಾಟಿಂಗ್ ಮಾಡಿದ್ದರು.
ಆದರೆ ಡಂಬುಲ್ಲಾ ಔರಾ ತಂಡವು ನಿರೀಕ್ಷಿತ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೊ 5 ರನ್ಗಳಿಸಿ ವಿಕೆಟ್ ಒಪ್ಪಿಸಿದರೆ, ಕುಸಾಲ್ ಮೆಂಡಿಸ್ 22 ರನ್ಗಳಿಸಲಷ್ಟೇ ಶಕ್ತರಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸಮರವಿಕ್ರಮ 30 ಎಸೆತಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 36 ರನ್ ಮಾತ್ರ. ಹಾಗೆಯೇ ಕುಸಾಲ್ ಪೆರೆರಾ 25 ಎಸೆತಗಳಲ್ಲಿ 31 ರನ್ ಬಾರಿಸಿದರು.
ಇದಾಗ್ಯೂ ಅಂತಿಮ ಹಂತದಲ್ಲಿ ಅಬ್ಬರಿಸಿದ ಧನಂಜಯ ಡಿಸಿಲ್ವಾ 29 ಎಸೆತಗಳಲ್ಲಿ 40 ರನ್ ಚಚ್ಚಿದರು. ಈ ಬಿರುಸಿನ ಬ್ಯಾಟಿಂಗ್ ನೆರವಿನಿಂದ ಡಂಬುಲ್ಲಾ ಔರಾ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಕಲೆಹಾಕಿತು.
148 ರನ್ಗಳ ಗುರಿ ಪಡೆದ ಬಿ-ಲವ್ ಕ್ಯಾಂಡಿ ತಂಡಕ್ಕೆ ಮೊಹಮ್ಮದ್ ಹ್ಯಾರಿಸ್ (26) ಹಾಗೂ ಕಾಮಿಂದು ಮೆಂಡಿಸ್ (44) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ದಿನೇಶ್ ಚಂಡಿಮಲ್ 24 ರನ್ಗಳ ಕೊಡುಗೆ ನೀಡಿದರು.
ಆದರೆ ಮಧ್ಯಮ ಕ್ರಮಾಂಕದಲ್ಲಿ ಉಂಟಾದ ದಿಢೀರ್ ಕುಸಿತದಿಂದ ಒಂದು ಹಂತದಲ್ಲಿ ಡಂಬುಲ್ಲಾ ಔರ ಬೌಲರ್ಗಳು ಮೇಲುಗೈ ಸಾಧಿಸಿದರು. ಈ ವೇಳೆ ತಮ್ಮ ಅನುಭವವನ್ನು ಧಾರೆಯೆರೆದ ಏಂಜೆಲೊ ಮ್ಯಾಥ್ಯೂಸ್ ಅಜೇಯ 25 ರನ್ ಬಾರಿಸುವ ಮೂಲಕ 19.5 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಬಿ-ಲವ್ ಕ್ಯಾಂಡಿ ತಂಡವು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಪಂದ್ಯ ಶ್ರೇಷ್ಠ : ಆಂಜೆಲೋ ಮ್ಯಾಥ್ಯುಸ್.
ಸರಣಿ ಶ್ರೇಷ್ಠ : ವನಿಂದು ಹಸರಂಗ
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…