ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಸೆಮಿಫೈನಲ್ನಲ್ಲಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್ಗೆ ಪ್ರವೇಶಿಸಿದೆ. ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ಲಯನ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕದಮ್ ಹಾಗೂ ನಿಹಾಲ್ ಉಳ್ಳಾಲ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಪವರ್ಪ್ಲೇನಲ್ಲಿ ಕೇವಲ 37 ರನ್ಗಳಿಸಲಷ್ಟೇ ಶಕ್ತರಾದರು.
ಈ ಹಂತದಲ್ಲಿ ನಿಹಾಲ್ (7) ಔಟಾದರೆ, ಆ ಬಳಿಕ ಬಂದ ವಿನಯ್ ಸಾಗರ್ (12) ಹಾಗೂ ಅಭಿನವ್ ಮನೋಹರ್ (2) ಕೂಡ ಬೇಗನೆ ನಿರ್ಗಮಿಸಿದರು. ಇನ್ನು ಶರತ್ 18 ರನ್ಗಳಿಸಿದರೆ, ನಾಯಕ ಶ್ರೇಯಸ್ ಗೋಪಾಲ್ 16 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಅಂತಿಮ ಹಂತದಲ್ಲಿ ಪ್ರಣವ್ ಭಾಟಿಯಾ 7 ಎಸೆತಗಳಲ್ಲಿ 16 ರನ್ ಬಾರಿಸುವ ಮೂಲಕ ಶಿವಮೊಗ್ಗ ಲಯನ್ಸ್ ತಂಡದ ಮೊತ್ತವನ್ನು 149-7 ಕ್ಕೆ ತಂದು ನಿಲ್ಲಿಸಿದರು.
150 ರನ್ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಲವ್ನೀತ್ ಸಿಸೋಡಿಯಾ 13 ರನ್ಗಳಿಸಿ 2ನೇ ಓವರ್ನಲ್ಲೇ ನಿರ್ಗಮಿಸಿದರು. ಆದರೆ ಮತ್ತೊಂದೆಡೆ ಸ್ಪೋಟಕ ದಾಂಡಿಗ ಮೊಹಮ್ಮದ್ ತಾಹ ಅಬ್ಬರಿಸಲಾರಂಭಿಸಿದರು.
ಇತ್ತ ತಾಹ ಅಬ್ಬರ ಆರಂಭವಾಗುತ್ತಿದ್ದಂತೆ ಶಿವಮೊಗ್ಗ ಲಯನ್ಸ್ ಬೌಲರ್ಗಳು ಲಯ ತಪ್ಪಿದರು. ಇದರ ಲಾಭವನ್ನು ಪಡೆಯುವಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣನ್ ಶ್ರೀಜಿತ್ ಕೂಡ ಯಶಸ್ವಿಯಾದರು.
ಪರಿಣಾಮ ಮೊಹಮ್ಮದ್ ತಾಹ ಕೇವಲ 38 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ 69 ರನ್ ಬಾರಿಸಿದರು. ಇನ್ನು ಶ್ರೀಜಿತ್ 39 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 61 ರನ್ ಸಿಡಿಸಿ 14 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್ಗೆ ಪ್ರವೇಶಿಸಿದೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…