ಕ್ರೀಡೆ

ಮಹಾರಾಜ ಟ್ರೋಫಿ 2023: ಫೈನಲ್​ಗೆ ಲಗ್ಗೆಯಿಟ್ಟ ಹುಬ್ಬಳ್ಳಿ ಟೈಗರ್ಸ್​

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಸೆಮಿಫೈನಲ್​ನಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ. ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಶಿವಮೊಗ್ಗ ಲಯನ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕದಮ್ ಹಾಗೂ ನಿಹಾಲ್ ಉಳ್ಳಾಲ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಪವರ್​ಪ್ಲೇನಲ್ಲಿ ಕೇವಲ 37 ರನ್​ಗಳಿಸಲಷ್ಟೇ ಶಕ್ತರಾದರು.

ಈ ಹಂತದಲ್ಲಿ ನಿಹಾಲ್ (7) ಔಟಾದರೆ, ಆ ಬಳಿಕ ಬಂದ ವಿನಯ್ ಸಾಗರ್ (12) ಹಾಗೂ ಅಭಿನವ್ ಮನೋಹರ್ (2) ಕೂಡ ಬೇಗನೆ ನಿರ್ಗಮಿಸಿದರು. ಇನ್ನು ಶರತ್ 18 ರನ್​ಗಳಿಸಿದರೆ, ನಾಯಕ ಶ್ರೇಯಸ್ ಗೋಪಾಲ್ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಅಂತಿಮ ಹಂತದಲ್ಲಿ ಪ್ರಣವ್ ಭಾಟಿಯಾ 7 ಎಸೆತಗಳಲ್ಲಿ 16 ರನ್ ಬಾರಿಸುವ ಮೂಲಕ ಶಿವಮೊಗ್ಗ ಲಯನ್ಸ್ ತಂಡದ ಮೊತ್ತವನ್ನು 149-7 ಕ್ಕೆ ತಂದು ನಿಲ್ಲಿಸಿದರು.

150 ರನ್​ಗಳ ಸುಲಭ ಗುರಿ ಬೆನ್ನತ್ತಿದ ಹುಬ್ಬಳ್ಳಿ ಟೈಗರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಲವ್ನೀತ್ ಸಿಸೋಡಿಯಾ 13 ರನ್​ಗಳಿಸಿ 2ನೇ ಓವರ್​ನಲ್ಲೇ ನಿರ್ಗಮಿಸಿದರು. ಆದರೆ ಮತ್ತೊಂದೆಡೆ ಸ್ಪೋಟಕ ದಾಂಡಿಗ ಮೊಹಮ್ಮದ್ ತಾಹ ಅಬ್ಬರಿಸಲಾರಂಭಿಸಿದರು.

ಇತ್ತ ತಾಹ ಅಬ್ಬರ ಆರಂಭವಾಗುತ್ತಿದ್ದಂತೆ ಶಿವಮೊಗ್ಗ ಲಯನ್ಸ್ ಬೌಲರ್​ಗಳು ಲಯ ತಪ್ಪಿದರು. ಇದರ ಲಾಭವನ್ನು ಪಡೆಯುವಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೃಷ್ಣನ್ ಶ್ರೀಜಿತ್ ಕೂಡ ಯಶಸ್ವಿಯಾದರು.

ಪರಿಣಾಮ ಮೊಹಮ್ಮದ್ ತಾಹ ಕೇವಲ 38 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 69 ರನ್ ಬಾರಿಸಿದರು. ಇನ್ನು ಶ್ರೀಜಿತ್ 39 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 61 ರನ್​ ಸಿಡಿಸಿ 14 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಗೆಲುವಿನೊಂದಿಗೆ ಮನೀಶ್ ಪಾಂಡೆ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

9 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

10 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

11 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

13 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

17 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

17 hours ago