ಕ್ರೀಡೆ

Maharaja trophy 2024: ಶಿವಮೊಗ್ಗ ಲಯನ್ಸ್‌ ವಿರುದ್ಧ 7 ರನ್‌ಗಳಿಂದ ಗೆದ್ದ ಮೈಸೂರು ವಾರಿಯರ್ಸ್‌

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ 2ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಶಿವಮೊಗ್ಗ ಲಯನ್ಸ್‌ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದು ಶುಭಾರಂಭ ಮಾಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ವಾರಿಯರ್ಸ್‌ ತಂಡ ನಿಗದಿತ 20 ಓವರ್‌ ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 159 ರನ್‌ ಬಾರಿಸಿ ಎದುರಾಳಿ ತಂಡಕ್ಕೆ 160 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಶಿವಮೊಗ್ಗ ಲಯನ್ಸ್‌ಗೆ ಮಳೆ ಕಾಡಿತು. ಮಳೆಯಿಂದಾಗಿ ಪಂದ್ಯವನ್ನು 9 ಓವರ್‌ ಗಳಿಗೆ ಇಳಿಸಲಾಯಿತು ಮತ್ತು ಶಿವಮೊಗ್ಗ ಲಯನ್ಸ್‌ಗೆ 88 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಶಿವಮೊಗ್ಗ 9 ಓವರ್‌ಗಳಲ್ಲಿ ಐದು ವಿಕೆಟ್‌ ಕಳೆದುಕೊಂಡು 80 ರನ್‌ ಗಳಿಸಿ 7 ರನ್‌ ಗಳ ಅಂತರದಿಂದ ಮೈಸೂರು ವಾರಿಯರ್ಸ್‌ ವಿರುದ್ಧ ಸೋಲು ಕಂಡಿತು.

ಮೈಸೂರು ವಾರಿಯರ್ಸ್ ಇನ್ನಿಂಗ್ಸ್:‌ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮೈಸೂರು ವಾರಿಯರ್ಸ್‌ ತಂಡಕ್ಕೆ ಬಿರುಸಿನ ಆರಂಭ ಸಿಗಲಿಲ್ಲ. ಆರಂಭಿಕ ಬ್ಯಾಟರ್‌ ಕಾರ್ತಿಕ್‌ ಸಿಎ 3(8), ಹಾಗೂ ಎಸ್‌ಯು ಕಾರ್ತಿಕ್‌ 18(20) ರನ್‌ ಗಳಿಸಿ ಬೇಗನೇ ಔಟಾದರು. ಬಳಿಕ ಬಂದ ನಾಯಕ ಕರುಣ್‌ ನಾಯರ್‌ 18(16) ಬೇಗನೆ ಪೆವಿಲಿಯನ್‌ ಸೇರಿದರು.

ಮೊದಲ ಪಂದ್ಯದಲ್ಲೇ ವಾರಿಯರ್ಸ್‌ ತಂಡಕ್ಕೆ ಮಧ್ಯಮ ಕ್ರಮಾಂಕ ಕೈ ಕೊಟ್ಟಿತು. ಶಮಿತ್‌ ದ್ರಾವಿಡ್‌ 7(9), ಸುಮಿತ್‌ ಕುಮಾರ್‌ 14(14), ದರ್ಮಾನಿ 1(2), ಜೆ ಸುಚಿತ್‌ 11(9),ಕೆ ಗೌತಮ್‌ 21(19) ರನ್‌ ಗಳಿಸಿದರು.

ಕೊನೆಯಲ್ಲಿ ಒಂದಾದ ಮನೋಜ್‌ ಬಂಡ್ಗೆ ಹಾಗೂ ಕಿಶನ್‌ ಔಟಾಗದೇ ತಂಡವನ್ನು 150ರ ಗಡಿ ದಾಟಿಸಿದರು. ಬಂಡ್ಗೆ 42(16) ಮತ್ತು ಕಿಶನ್‌ 12(8) ರನ್‌ ಗಳಿಸಿದರು.

ಶಿವಮೊಗ್ಗ ಪರ ಹಾರ್ದಿಕ್‌ ರಾಜ್‌, ಪ್ರದೀಪ್‌ ಹಾಗೂ ಅವಿನಾಶ್‌ ತಲಾ ಎರಡು ವಿಕೆಟ್‌, ಆನಂದ್‌ ಒಂದು ವಿಕೆಟ್‌ ಪಡೆದು ಗಮನ ಸೆಳೆದರು.

ಶಿವಮೊಗ್ಗ ಇನ್ನಿಂಗ್ಸ್‌: 9 ಓವರ್‌ಗಳಲ್ಲಿ 88 ರನ್‌ ಗುರಿ ಬೆನ್ನತ್ತಿದ ಲಯನ್ಸ್‌ಗೆ ಅಭಿನವ್‌ ಮನೋಹರ್‌ ಹೊರತುಪಡಿಸಿ ಬೇರಾರಿಂದಲೂ ನಿರೀಕ್ಷಿತಾ ಆಟ ಕಂಡುಬರಲಿಲ್ಲ. ಮನೋಹರ್‌ 29 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್‌ ಸಹಿತ 52 ರನ್‌ ಬಾರಿಸಿ ಔಟಾದರು. ಬಳಿಕ ಬಂದ ಯಾರಿಂದಲೂ ತಂಡವನ್ನು ಗೆಲ್ಲಿಸಿಕೊಡಲು ಸಾಧ್ಯವಾಗಲಿಲ್ಲ. ನಾಯಕ ನಿಹಾಲ್‌ ಉಲ್ಲಾಳ್‌ ಡಕ್‌ಔಟ್‌ ಆದರೆ, ರೋಹಿತ್‌ 12(10) ರನ್‌ ಗಳಿಸಿ ನಿರ್ಗಮಿಸಿದರು. ಶಿವರಾಜ್‌ ಟಕ್‌ಔಟ್‌, ಅವಿನಾಶ್‌ ಡಿ 12(10) ರನ್‌ ಬಾರಿಸಿದರೇ, ಭುವನ್‌ ಔಟಾಗದೇ ಉಳಿದರು.

ಮೈಸೂರು ವಾರಿಯರ್ಸ್‌ ಪರ ಜೆ ಸುಜಿತ್‌ ಎರಡು, ವಿದ್ಯಾಧರ್‌ ಪಾಟೀಲ್‌ ಹಾಗೂ ಗೌತಮ್‌ ಮಿಶ್ರಾ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ಮನೋಜ್‌ ಬಂಡ್ಗೆ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

2 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

9 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

15 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago