ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 8 ವಿಕೆಟ್ ಅಂತರದಲ್ಲಿ ಜಯ ಗಳಿಸಿದೆ.
ನಾಯಕ ಕೃಷ್ಣಪ್ಪ ಗೌತಮ್ (72) ಹಾಗೂ ಸ್ಟಾಲಿನ್ ಹೂವರ್ (53*) ಅವರ ಆರ್ಕಷಕ ಅರ್ಧ ಶತದಕ ನೆರವಿನಿಂದ ಶಿವಮೊಗ್ಗ 137 ರನ್‌ಗಳ ಜಯದ ಗುರಿಯನ್ನು ಇನ್ನೂ 46 ಎಸೆತಗಳು ಬಾಕಿ ಇರುವಾಗಲೇ ಕೇವಲ 2 ವಿಕೆಟ್ ಕಳೆದುಕೊಂಡು ತಲುಪಿತು. ಈಗಾಗಲೇ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಶಿವಮೊಗ್ಗಕ್ಕೆ ಈ ಜಯ ಆತ್ಮವಿಶ್ವಾಸವನ್ನು ಹೆಚ್ಚಿಸಿತೇ ಹೊರತು, ಅಂಕಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನುಂಟು ಮಾಡಲಿಲ್ಲ.
ನಾಯಕನ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಗೌತಮ್ ಅವರ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸೇರಿತ್ತು. ಸ್ಟಾಲಿನ್ ಹೂವರ್ ಕೇವಲ 35 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ ಅಜೇಯ 53 ರನ್ ಗಳಿಸಿದರು. ಕೃಷ್ಣಪ್ಪ ಗೌತಮ್ ಹಾಗೂ ಹೂವರ್ 131 ರನ್ ಜೊತೆಯಾಟವಾಡಿದರು.
ಅಲ್ಪ ಮೊತ್ತಕ್ಕೆ ತೃಪ್ತಿಪಟ್ಟ ಮಂಗಳೂರು:
ನಾಯಕ ಕೃಷ್ಣಪ್ಪ ಗೌತಮ್ ಅವರ ಬೌಲಿಂಗ್ ದಾಳಿಗೆ ಸಿಲುಕಿದ ಮಂಗಳೂರು ಯುನೈಟೆಡ್ ಕೇವಲ 136 ರನ್ ಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಶಿವಮೊಗ್ಗ ಸ್ಟ್ರೈಕರ್ಸ್, ನಿಕಿನ್ ಜೋಸ್ (38) ಹಾಗೂ ಅಭಿನವ್ ಮನೋಹರ್
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…