ಕ್ರೀಡೆ

Paris Olympics 2024: ಮುಕ್ತಾಯ ಸಮಾರಂಭದಲ್ಲಿ ಧ್ವಜ ಹಿಡಿದು ಸಾಗಲಿರುವ ಮನು ಭಾಕರ್‌

ಪ್ಯಾರಿಸ್‌: ವಿಶ್ವ ವಿಖ್ಯಾತ ಕ್ರೀಡಾಕೂಟ ಒಲಂಪಿಕ್ಸ್‌ ಮುಕ್ತಾಯ ಸಮಾರಂಭ ಇದೇ ಭಾನುವಾರ (ಆ.11) ನಡೆಯಲಿದ್ದು, ಇದರಲ್ಲಿ ಭಾರತದ ಪರವಾಗಿ ಶೂಟರ್‌ ಮನು ಭಾಕರ್‌ ಅವರು ಭಾರತದ ಧ್ವಜ ಹಿಡಿದು ಸಾಗಲಿದ್ದಾರೆ.

ಪ್ರಸಕ್ತ ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದಲ್ಲಿ ಸತತ ಎರಡು ಪದಕಗಳನ್ನು ಗೆದ್ದಿರುವ ಮನು ಭಾಕರ್‌ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗುವ ಗೌರವಕ್ಕೆ ಭಾಜನರಾಗಿದ್ದಾರೆ.

ಒಲಂಪಿಕ್ಸ್‌ನಲ್ಲಿ ಅದ್ಬುತ ಪ್ರದರ್ಶನ ತೋರಿರುವ ಭಾಕರ್‌ ಅವರು ಧ್ವಜ ಹಿಡಿಯುವ ಗೌರವಕ್ಕೆ ಅರ್ಹರು. ಭಾಕರ್‌ ಅವರು ಮುಕ್ತಾಯ ಸಮಾರಂಭದಲ್ಲಿ ಭಾರತ ಧ್ವಜ ಹಿಡಿದು ಸಾಗಲಿದ್ದಾರೆ ಎಂದು ಭಾರತೀಯ ಒಲಂಪಿಕ್ಸ್‌ ಸಂಸ್ಥೆ (ಐಒಎ) ಹೇಳಿಕೆ ನೀಡಿದೆ.

22 ವರ್ಷದ ಹರ್ಯಾಣದ ಮನು ಭಾಕರ್‌ ಅವರು ತಮ್ಮ ಚೊಚ್ಚಲ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ 10 ಮೀ ಏರ್‌ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟರು. ಇದಾದ ಬಳಿಕ ಶರಬ್ಜೋತ್‌ ಸಿಂಗ್‌ ಜೊತೆ ಮಿಶ್ರ ಡಬಲ್ಸ್‌ನಲ್ಲಿಯೂ ಸಹಾ ಕಂಚಿನ ಪದಕ ಗೆದ್ದುಕೊಟ್ಟರು. ಭಾರತಕ್ಕೆ ಬಂದಿರುವ ಮೂರು ಮೆಡಲ್‌ಗಳು ಶೂಟಿಂಗ್‌ನಿಂದಲೇ ಬಂದಿದ್ದರೇ, ಅದರಲ್ಲಿ ಎರಡು ಪದಕಗಳನ್ನು ಭಾಕರ್‌ ಅವರು ಗೆದ್ದುಕೊಟ್ಟಿದ್ದಾರೆ.

ಇನ್ನು ಮುಕ್ತಾ ಸಮಾರಂಭದಲ್ಲಿ ಭಾರತ ಪರವಾಗಿ ಧ್ವಜ ಹಿಡಿಯಲಿರುವ ಪುರುಷ ಕ್ರೀಡಾಪಟು ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

18 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

18 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

19 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

20 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

20 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

21 hours ago