ಕ್ರೀಡೆ

Paris Olympics 2024: ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವದಾಖಲೆ ಬರೆದ ಭಾಕರ್‌!

ಪ್ಯಾರಿಸ್‌: ಹರ್ಯಾಣ ಮೂಲದ 22 ವರ್ಷದ ಮನು ಭಾಕರ್‌ ಅವರು ಇಲ್ಲಿನ ಪ್ಯಾರಿಸ್‌ ಒಲಂಪಿಕ್ಸ್‌ನ ಕ್ರೀಡಾಕೂಟದಲ್ಲಿ ತಮ್ಮ ವೈಯಕ್ತಿಕ ಎರಡನೇ ಕಂಚಿನ ಪದಕ ಗೆಲ್ಲುವ ಮೂಲಕ ವಿಶ್ವ ದಾಖಲೆಯನ್ನು ರಚಿಸಿದ್ದಾರೆ.

ಭಾರತದ ಆಟಗಾರ್ತಿಯೊಬ್ಬರು ಒಂದೇ ಒಲಂಪಿಕ್ಸ್‌ನಲ್ಲಿ ಒಂದಕ್ಕಿಂತ ಎರಡು ಮೆಡಲ್‌ಗಳನ್ನು ಗೆದ್ದ ಏಕೈಕ ಆಟಗಾರ್ತಿ ಎಂಬ ಹಿರಿಮೆ ಪಾತ್ರರಾಗಿದ್ದಾರೆ.

10 ಮೀ ಏರ್‌ ಪಿಸ್ತೂಲ್‌ ಮಿಶ್ರ ತಂಡ ಸ್ಪರ್ಧೆಯಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಕಂಚಿಗಾಗಿ ನಡೆದ ಕಾದಾಟದಲ್ಲಿ ಭಾರತದ ಮನು ಭಾಕರ್‌ ಹಾಗೂ ಶರಬ್ಜೋತ್‌ ಸಿಂಗ್‌ ಗೆಲ್ಲುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.

ಈ ಜೋಡಿಯು ರೊಪಬ್ಲಿಕ್‌ ಆಫ್‌ ಕೊರಿಯಾ ಜೋಡಿಯಾದ ಓಹ್‌ ಯೆ ಜಿನ್‌ ಹಾಗೂ ಲೀ ವೋನ್ಹೋ ಅವರ ವಿರುದ್ಧ 10-16 ರ ಅಂತರದಿಂದ ಭಾರತದ ಸ್ಪರ್ಧಿಗಳು ವಿಜೇತರಾಗಿದ್ದಾರೆ.

ಇದರೊಂದಿಗೆ ಭಾರತಕ್ಕೆ ಎರಡನೇ ಪದಕ ಹಾಗೂ ಮುನ ಭಾಕರ್‌ ಅವರಿಗೂ ಸಹಾ ವೈಯಕ್ತಿಕ ಎರಡನೇ ಪದಕ ಬಂದಂತಾಗಿದೆ. ಇನ್ನು ಮನು ಭಾಕರ್‌ ಅವರು 25 ಮೀ ಎರ್‌ ರೈಫಲ್‌ ಶೂಟಿಂಗ್‌ ನಲ್ಲಿಯೂ ಭಾಗವಹಿಸುತ್ತಿದ್ದು, ಭಾರತೀಯರಿಗೆ ಮತ್ತೊಂದ ಪದಕದ ನಿರೀಕ್ಷೆ ಹುಟ್ಟಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

40 mins ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

43 mins ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

45 mins ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

49 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

56 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

1 hour ago