ಅಹಮದಾಬಾದ್: ವಿಜಯ್ ಹಜಾರೆ ಟ್ರೋಫಿಯ ಏಕದಿನ ಕ್ರಿಕೆಟ್‌ನಲ್ಲಿ ಸತತ 4ನೇ ಜಯ ದಾಖಲಿಸುವ ಮೂಲಕ ಕರ್ನಾಟಕ ತಂಡ ತನ್ನ ಗೆಲುವಿನ ಓಟ ಮುಂದುವರೆಸಿದೆ.
ಅಹಮದಾಬಾದ್ ನಗರದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನಾಯಕ ಮಯಾಂಕ್ ಅಗರವಾಲ್ 100(45) ಅಜೇಯ ಶತಕದ ನೆರವಿನಿಂದ ಅರುಣಾಚಲ ಪ್ರದೇಶದ ವಿರುದ್ಧ ಕರ್ನಾಟಕ ತಂಡವು 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದ ಕರ್ನಾಟಕ ತಂಡ ಎದುರಾಳಿ ಅರುಣಾಚಲ ಪ್ರದೇಶ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ನಾಯಕನ ಆಯ್ಕೆಯನ್ನು ಸಮರ್ಥಿಸಿಕೊಂಡ ಕರ್ನಾಟಕ ತಂಡದ ಬೌಲರ್‌ಗಳಾದ ವಿ ಕೌಶಿಕ್ ಹಾಗೂ ಹಾರ್ದಿಕ್ ರಾಜ್ ತಲಾ 4 ವಿಕೆಟ್ ಪಡೆದರು.
ಕರ್ನಾಟಕ ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿದ ಅರುಣಾಚಲ ಪ್ರದೇಶವು 43.2 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್ ಆಯಿತು. ಆದರೆ ಅರುಣಾಚಲ ತಂಡದ ಪರವಾಗಿ ಏಕಾಂಗಿ ಹೋರಾಟ ನಡೆಸಿದ ಅಭಿನವ್ ಸಿಂಗ್ 71(100) ರನ್‌ಗಳಿಸಿ ನಾಟ್ ಔಟ್ ಆಗಿ ಉಳಿದರು.
ಈ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ಆರಂಭಿಕ ಬ್ಯಾಟರ್‌ಗಳ ಅಬ್ಬರದಿಂದ ಕೇವಲ 14.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಗುರಿ ತಲುಪಿ ತನ್ನ ಅಜೇಯ ಓಟ ಮುಂದುವರೆಸಿತು.
ಮಯಾಂಕ್ ಅಗರ್‌ವಾಲ್ 45 ಎಸೆತಗಳಲ್ಲಿ ಶತಕ ಗಳಿಸಿದರೆ, ಅಭಿನವ್ ಮನೋಹರ್ 66 ರನ್‌ಗಳಿಸಿ ಅಜೆಯರಾಗಿ ಉಳಿದರು. ಈ ಗೆಲುವಿನ ಮೂಲಕ ಕರ್ನಾಟಕ ತಂಡವು 16 ಅಂಕಗಳೊಂದಿಗೆ ʼಸಿʼ ಗುಂಪಿನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…