ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ ಬಂದಿಳಿದಿದ್ದಾರೆ, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ.
ತಮ್ಮ ಪ್ರವಾಸದ ಅಂತಿಮ ಹಂತವಾಗಿ ದಿಲ್ಲಿಗೆ ಆಗಮಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ,
ಮೆಸ್ಸಿ ಮತ್ತು ಅವರ ಪರಿವಾರವು ಇಂದು ಚಾಣಕ್ಯಪುರಿಯಲ್ಲಿರುವ ದಿ ಲೀಲಾ ಪ್ಯಾಲೇಸ್‌ಗೆ ಭೇಟಿ ನೀಡಲಿದ್ದು, ಅಲ್ಲಿ ಅವರಿಗಾಗಿಯೇ ಸಂಪೂರ್ಣ ಒಂದು ಮಹಡಿಯನ್ನು ಕಾಯ್ದಿರಿಸಲಾಗಿದೆ. ಅರ್ಜೆಂಟೀನಾದ ಮೆಸ್ಸಿ ತಂಡಕ್ಕೆ ಹೋಟೆಲ್‌ನ ಪ್ರೆಸಿಡೆನ್ಸಿ ಸೂಟ್‌ಗಳನ್ನು ನೀಡಲಾಗಿದ್ದು, ಒಂದು ರಾತ್ರಿ ವಾಸ್ತವ್ಯಕ್ಕೆ 3.5 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ ಇರುತ್ತದೆ ಎಂದು ವರದಿಯಾಗಿದೆ.
ಇದನ್ನು ಓದಿ: ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ರಾಜ್ಯ ಕಾಂಗ್ರೆಸ್‌ನ ಗೊಂದಲ, ವರಿಷ್ಠರ ಪ್ಲಾನ್ ವಿಫಲ
ಮೆಸ್ಸಿ ಅವರ ಜೊತೆ ವಿಶೇಷ ಸಂವಾದಕ್ಕೆ ಕೆಲವು ಕಾರ್ಪೊರೇಟ್‌ಗಳು ಫುಟ್‌ಬಾಲ್ ಐಕಾನ್ ಅನ್ನು ಭೇಟಿ ಮಾಡುವ ಅವಕಾಶಕ್ಕಾಗಿ 1 ಕೋಟಿ ರೂ.ವರೆಗೆ ಖರ್ಚು ಮಾಡುತ್ತಿವೆ ಎಂದು ದಿಲ್ಲಿ ಸುದ್ದಿವಾಹಿನಿಗಳು ವರದಿ ಮಾಡಿವೆ. ದೆಹಲಿಯಲ್ಲಿ ಅವರ ಸಂಕ್ಷಿಪ್ತ ಭೇಟಿಯ ಸಮಯದಲ್ಲಿ, ಮೆಸ್ಸಿ ಭಾರತದ ಮುಖ್ಯ ನ್ಯಾಯಾಧೀಶರು, ಹಲವಾರು ಸಂಸದರು ಮತ್ತು ಕ್ರಿಕೆಟಿಗರು ಹಾಗೂ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಪದಕ ವಿಜೇತರು ಸೇರಿದಂತೆ ಭಾರತೀಯ ಕ್ರೀಡಾ ತಾರೆಯರ ಆಯ್ದ ಗುಂಪನ್ನು ಭೇಟಿ ಮಾಡಲಿದ್ದಾರೆ.
ವಿಶ್ವ ಪುಟ್ ಬಾಲ್ ದಿಗ್ಗಜ ಲಿಯೋನಲ್ ಮೆಸ್ಸಿ ನಿನ್ನೆ ಮುಂಬೈನಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೊಲ್ಕರ್ ಹಾಗೂ ಭಾರತದ ಫುಟ್ ಬಾಲ್ ದಂತಕಥೆ ಸುನಿಲ್ ಚೆಟ್ರಿ ಜೊತೆಗೆ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹಬ್ಬವನ್ನುಂಟು ಮಾಡಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…