ನವದೆಹಲಿ : ಐಸಿಸಿ ಏಕದಿನ ವಿಶ್ವಕಪ್-2023 ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಎದುರಾಗಲಿವೆ. ಈ ಪಂದ್ಯ ನರೇಂದ್ರ ಮೊದಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತೀಯ ಕಾಲಮಾನ ಮದ್ಯಾಹ್ನ 2ಕ್ಕೆ ಆರಂಭವಾಗಲಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದ ಬಗ್ಗೆ ಆಸ್ಟ್ರೇಲಿಯಾ ಸ್ಟಾರ್ ಆಲ್ ರೌಂಡರ್ ಮಿಚೆಲ್ ಮಾರ್ಷ್ ಅವರು ಇದೀಗ ಫೈನಲ್ ಬಗ್ಗೆ ಭವಿಷ್ಯ ನುಡಿದಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಐಪಿಎಲ್-2023ರಲ್ಲಿ ಡೆಲ್ಲಿ ಕ್ಯಾಫಿಟಲ್ಸ್ ಪ್ರೋಡ್ಕಾಸ್ಟ್ ಕಾರ್ಯಕ್ರಮದಲ್ಲಿ ವಿಶ್ವಕಪ್ ಫೈನಲ್ ಕುರಿತಂತೆ ನೀಡಿದ್ದ ಹೇಳಿಕೆ ಭಾರೀ ವೈರಲ್ ಆಗಿದ್ದು, ಫೈನಲ್ ಪಂದ್ಯಕ್ಕೂ ಮುನ್ನಾ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ವಿಶ್ವಕಪ್-2023ರಲ್ಲಿ ಆಸ್ಟ್ರೇಲಿಯಾ ತಂಡ ಅಜೇಯವಾಗಿ ಉಳಿಯಲಿದ್ದು, ಫೈನಲ್ ನಲ್ಲಿ ಭಾರತವನ್ನು ಮಣಿಸಲಿದೆ. ಆಸ್ಟ್ರೇಲಿಯಾ ತಂಡವು ಫೈನಲ್‌ನಲ್ಲಿ ಭಾರತ ವಿರುದ್ಧ 450 ರನ್‌ಗಳನ್ನು ಕೇವಲ 2 ವಿಕೆಟ್ ಕಳೆದುಕೊಂಡು ಕಲೆಹಾಕಿದರೆ, ಭಾರತ ಕೇವಲ 65 ರನ್ ಗಳಿಗೆ ಆಲ್‌ಔಟ್ ಆಗಲಿದೆ ಎಂದು ಬವಿಷ್ಯ ನುಡಿದಿದ್ದರು.
ಈ ಬಾರಿಯ ವರ್ಲ್ಡ್ ಕಪ್‌ನಲ್ಲಿ ಭಾರತ ತಂಡವು ಅಜೇಯ ದಾಖಲೆಗಳನ್ನು ದಾಖಲಿಸಿದ್ದು, ಒಂದೇ ಒಂದು ಪಂದ್ಯದಲ್ಲಿಯೂ ಸೋಲದೇ ಫೈನಲ್ ಪ್ರವೇಶ ಪಡೆದಿರುವ ಭಾರತ ತಂಡದ ಬಗ್ಗೆ ಮಾರ್ಷ್‌ರ ಹೇಳಿಕೆ ವಿವಾದವನ್ನು ಪಡೆದುಕೊಂಡಿದೆ.
ಲೀಗ್‌ನಲ್ಲಿ ಹೀನಾಯ ಸೋಲುಗಳ ಬಳಿಕ ಕಮ್‌ಬ್ಯಾಕ್ ಮಾಡಿದ ಆಸ್ಟ್ರೇಲಿಯಾ ತಂಡ ಸೆಮಿಸ್‌ನಲ್ಲಿ ದ. ಆಫ್ರಿಕಾ ವಿರುದ್ಧ ಜಯ ದಾಖಲಿಸಿ ಫೈನಲ್ ತಲುಪಿದೆ.
ವರ್ಲ್ಡ್ ಕಪ್ ಆರಂಭದ ಪಂದ್ಯದಲ್ಲಿ ಭಾರತ ಮತ್ತು ಆಸೀಸ್ ಮುಖಾಮುಖಿಯಾಗಿತ್ತು. ಆ ಪಂದ್ಯದಲ್ಲಿ ಭಾರತ ಭರ್ಜರಿ ಜಯ ದಾಖಲಿಸಿತ್ತು.
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…