ಬ್ರಿಸ್ಬೇನ್: ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಟೆಸ್ಟ್ ಮತ್ತು ಏಕದಿನ ಮಾದರಿಗಳಲ್ಲಿ ತಮ್ಮ ವೃತ್ತಿಜೀವನವನ್ನು ವಿಸ್ತರಿಸುವ ಉದ್ದೇಶದಿಂದ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದಾರೆ.
ಆಸ್ಟ್ರೇಲಿಯಾದ ದೀರ್ಘಕಾಲ ಸೇವೆ ಸಲ್ಲಿಸಿದ ವೇಗದ ಬೌಲಿಂಗ್ ತ್ರಿಮೂರ್ತಿಗಳ ಇಬ್ಬರು ಸದಸ್ಯರಾದ ಸ್ಟಾರ್ಕ್ ಮತ್ತು ಟೆಸ್ಟ್ ನಾಯಕ ಪ್ಯಾಟ್ ಕಮಿನ್ಸ್ ಅವರು ಅಕ್ಟೋಬರ್ 1 ರಿಂದ ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಸರಣಿಗಾಗಿ ಘೋಷಿಸಲಾದ ರಾಷ್ಟ್ರೀಯ ಟಿ20 ತಂಡದಲ್ಲಿ ಸ್ಥಾನ ಪಡೆದಿಲ್ಲ.
ಆಸ್ಟ್ರೇಲಿಯಾದ ಪರ 65 ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 79 ವಿಕೆಟ್‌ಗಳನ್ನು ಪಡೆದಿರುವ 35 ವರ್ಷದ ಸ್ಟಾರ್ಕ್, ಟೆಸ್ಟ್ ಕ್ರಿಕೆಟ್ ತನ್ನ ಆದ್ಯತೆಯಾಗಿದೆ ಮತ್ತು ಮುಂದಿನ ಎರಡು ವರ್ಷಗಳಲ್ಲಿ ತೀವ್ರವಾದ ಅಂತರರಾಷ್ಟ್ರೀಯ ವೇಳಾಪಟ್ಟಿಗೆ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು.
ಕಳೆದ ತಿಂಗಳು ಕೆರಿಬಿಯನ್‌ನಲ್ಲಿ ನಡೆದ ಟೆಸ್ಟ್ ಸರಣಿಯ ನಂತರ ಕಮ್ಮಿನ್‌್ಸಗೆ ವಿಶ್ರಾಂತಿ ನೀಡಲಾಗಿದ್ದು, ನವೆಂಬರ್‌ನಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ ಆಶಸ್ ಸರಣಿಗೆ ಅವರ ಸಿದ್ಧತೆಯನ್ನು ಸೀಮಿತಗೊಳಿಸಲಾಗಿದೆ. ಸ್ಟಾರ್ಕ್ ಮುಂದಿನ ವರ್ಷ ಆಶಸ್ ಮತ್ತು ಭಾರತದಲ್ಲಿ ನಡೆಯುವ ಟೆಸ್ಟ್ ಸರಣಿ ಮತ್ತು 2027 ರಲ್ಲಿ ನಡೆಯಲಿರುವ ಮುಂದಿನ ಏಕದಿನ ವಿಶ್ವಕಪ್‌ಗಾಗಿ ಪೂರ್ಣ ಫಿಟ್‌ನೆಸ್‌ನಲ್ಲಿರಲು ಈ ತೀರ್ಮಾನ ಕೈಗೊಂಡಿದ್ದಾರೆ.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…