ಮೆಲ್ಬೊರ್ನ್ : ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಈಗಾಗಲೇ 6 ಲಕ್ಷಕ್ಕೂ ಅಧಿಕ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ. ಈ ಕುರಿತಂತೆ ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಹಲವು ಹೈವೋಲ್ಟೇಜ್ ಪಂದ್ಯಗಳ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.
ಚುಟುಕು ಕ್ರಿಕೆಟ್ ಮಹಾಸಂಗ್ರಾಮವು ಇದೇ ಭಾನುವಾರದಿಂದ ಆರಂಭವಾಗಲಿದ್ದು, ಮೊದಲ ಹಂತದಲ್ಲಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿವೆ. ಅರ್ಹತಾ ಸುತ್ತಿನಲ್ಲಿ ಅಗ್ರ 4 ಸ್ಥಾನ ಪಡೆಯುವ ತಂಡಗಳು ಸೂಪರ್ 12 ಹಂತಕ್ಕೆ ಲಗ್ಗೆಯಿಡಲಿವೆ. ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 22ರಿಂದ ಆರಂಭವಾಗಲಿದೆ. ಆಸ್ಟ್ರೇಲಿಯಾದ ಏಳು ನಗರಗಳಲ್ಲಿ ಟಿ20 ವಿಶ್ವಕಪ್ ಪಂದ್ಯಾವಳಿಗಳು ಜರುಗಲಿವೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವು ಮೊದಲ ಪಂದ್ಯದಲ್ಲಿ ರನ್ನರ್ ಅಪ್ ನ್ಯೂಜಿಲೆಂಡ್ ಎದುರು ಮೊದಲ ಪಂದ್ಯವನ್ನಾಡಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತಿಥ್ಯವನ್ನು ವಹಿಸಲಿದೆ.
ಇನ್ನು ಅಕ್ಟೋಬರ್ 23ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಮೆಲ್ಬೊರ್ನ್ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಪಂದ್ಯದ ಎಲ್ಲಾ 90,000 ಸಾವಿರ ಟಿಕೆಟ್‌ಗಳು ಈಗಾಗಲೇ ಸೋಲ್ಡೌಟ್ ಆಗಿವೆ. ಇನ್ನು ಹೆಚ್ಚುವರಿ ಸ್ಟ್ಯಾಂಡಿಂಗ್ ರೂಮ್‌ನ ಟಿಕೆಟ್‌ಗಳು ಮಾರಾಟಕ್ಕಿಟ್ಟ 10 ನಿಮಿಷಗಳಲ್ಲೇ ಎಲ್ಲಾ ಟಿಕೆಟ್‌ಗಳು ಸೋಲ್ಡೌಟ್ ಆಗಿವೆ.
ಇನ್ನು ಅಕ್ಟೋಬರ್ 16ರಂದು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ನಮೀಬಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಗೀಲಾಂಗ್‌ನಲ್ಲಿ ನಡೆಯಲಿರುವ ಪಂದ್ಯದ ಕೆಲವೇ ಕೆಲವು ಟಿಕೆಟ್‌ಗಳು ಲಭ್ಯವಿವೆ. ಗೀಲಾಂಡ್‌ನ ಕಾರ್ಡಿನಿಯಾ ಪಾರ್ಕ್ ಸ್ಟೇಡಿಯಂ ವೀಕ್ಷಕರ ಕೆಪಾಸಿಟಿ 36,000 ಇದೆ. ಇದಾದ ಬಳಿಕ ಎರಡನೇ ಪಂದ್ಯದಲ್ಲಿ ಇದೇ ಮೈದಾನದಲ್ಲಿ ನೆದರ್ಲೆಂಡ್ ಹಾಗೂ ಯುಎಇ ತಂಡಗಳು ಸೆಣಸಾಡಲಿವೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸೂಪರ್ ಹಂತಕ್ಕೆ ಈಗಾಗಲೇ 8 ತಂಡಗಳು ನೇರ ಅರ್ಹತೆಯನ್ನು ಪಡೆದಿವೆ. ಇನ್ನುಳಿದ ಎಂಟು ತಂಡಗಳ ಪೈಕಿ 4 ತಂಡಗಳು ಅರ್ಹತಾ ಸುತ್ತಿನ ಪಂದ್ಯಗಳನ್ನಾಡಿ ಸೂಪರ್ 12 ಹಂತಕ್ಕೆ ಪ್ರವೇಶ ಪಡೆಯಲಿವೆ. ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಹಾಗೂ ಒಮ್ಮೆ ಚಾಂಪಿಯನ್ ಅಗಿರುವ ಶ್ರೀಲಂಕಾ ತಂಡ ಕೂಡಾ ಈ ಬಾರಿ ಅರ್ಹತಾ ಸುತ್ತಿನಲ್ಲಿ ಸೆಣಸಾಟ ನಡೆಸಲಿವೆ. ಇನ್ನು ಈ ಬಾರಿ ಟೀಂ ಇಂಡಿಯಾ, ಇಂಗ್ಲೆಂಡ್, ಪಾಕಿಸ್ತಾನ, ಆತಿಥೇಯ ಆಸ್ಟ್ರೇಲಿಯಾ ಈ ಬಾರಿ ಟಿ20 ವಿಶ್ವಕಪ್ ಗೆಲ್ಲಬಲ್ಲ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿವೆ.
ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್…
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…
ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…
ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …