ಕ್ರೀಡೆ

ಅಲ್ಕರಾಝ್-ಝೆರ್ವೆವ್ ಪಂದ್ಯ ನೋಡಿ ಆನಂದಿಸಿದ ಎಂ.ಎಸ್.ಧೋನಿ

ನ್ಯೂಯಾರ್ಕ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2023ರ ಯು.ಎಸ್. ಓಪನ್‌ನಲ್ಲಿ ಕಾರ್ಲೊಸ್ ಅಲ್ಕರಾಝ್ ಹಾಗೂ ಅಲೆಕ್ಸಾಂಡರ್ ಝ್ವೆರೆವ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯವನ್ನು ವೀಕ್ಷಿಸಿ ಆನಂದಿಸಿದರು.

ಯು.ಎಸ್. ಓಪನ್‌ನ ಅಧಿಕೃತ ಪ್ರಸಾರ ಸಂಸ್ಥೆಯು ಅಲ್ಕರಾಝ್ ಹಾಗೂ ಝ್ವೆರೆವ್ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯದ ವೀಡಿಯೊವನ್ನು ಹಂಚಿಕೊಂಡಿದ್ದು, ಪ್ರೇಕ್ಷಕರ ಗ್ಯಾಲರಿನಲ್ಲಿ ಕುಳಿತಿದ್ದ ಧೋನಿ ರೋಚಕ ಸ್ಪರ್ಧೆಯನ್ನು ವೀಕ್ಷಿಸುತ್ತಿರುವ ಕ್ಷಣವನ್ನು ಸೆರೆ ಹಿಡಿದಿದೆ.

ಅರ್ಥರ್ ಅಶೆ ಸ್ಟೇಡಿಯಮ್‌ನಲ್ಲಿ 2011ರ ವಿಶ್ವಕಪ್ ವಿಜೇತ ತಂಡದ ನಾಯಕನೊಂದಿಗೆ ಸೆಲ್ಫಿ ತೆಗೆದುಕೊಂಡ ಅಭಿಮಾನಿಯೊಬ್ಬ ಅದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾನೆ. ವಿಶ್ವದ ನಂ.1 ಆಟಗಾರ ಧೋನಿ ಜರ್ಮನಿಯ ಝ್ವೆರೆವ್‌ರನ್ನು ಕ್ವಾರ್ಟರ್ ಫೈನಲ್‌ನಲ್ಲಿ ಮಣಿಸಿದ್ದು ಸೆಮಿ ಫೈನಲ್‌ನಲ್ಲಿ ಡೇನಿಯಲ್ ಮೆಡ್ವೆಡೆವ್ ಸವಾಲನ್ನು ಎದುರಿಸಲಿದ್ದಾರೆ.

ಧೋನಿ ಈ ವರ್ಷಾರಂಭದಲ್ಲಿ ಚೆನ್ನೈಸೂಪರ್ ಕಿಂಗ್ಸ್ ತಂಡ ಐಪಿಎಲ್ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿ ಐದನೇ ಬಾರಿ ಪ್ರಶಸ್ತಿ ಜಯಿಸುವಲ್ಲಿ ನೆರವಾಗಿದ್ದರು. ಸಿಎಸ್‌ಕೆ 2023ರ ಐಪಿಎಲ್ ಪ್ರಶಸ್ತಿ ಗೆದ್ದ ನಂತರ ಧೋನಿ ಅವರು ಮುಂದಿನ ವರ್ಷದ ಐಪಿಎಲ್‌ನಲ್ಲೂ ಆಡುವುದಾಗಿ ಹೇಳಿದ್ದರು.

andolanait

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

1 hour ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

1 hour ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

1 hour ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

2 hours ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

2 hours ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

2 hours ago