IPLನ 17ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಈ ಸೀಸನ್ನ ಮೊದಲ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.
ಈ ಸೀಸನ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ತಮ್ಮ ಅಭಿಮಾನಿಗಳಿಗೆ ಬಿಗ್ ಅಪ್‌ಡೇಟ್ ಕೊಟ್ಟಿದ್ದಾರೆ. ತಮ್ಮ ಫೇಸ್ ಬುಕ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಎಂಎಸ್‌ಡಿ ಸಂಚಲನ ಮೂಡಿಸಿದ್ದಾರೆ.
ಸೋಷಿಯಲ್ ಮೀಡಿಯಾ ದಲ್ಲಿ ಅಷ್ಟಾಗಿ ಆಕ್ಟಿವ್ ಇರದ ಧೋನಿ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ಈ ಪೋಸ್ಟ್ ಭಾರಿ ಸದ್ದು ಮಾಡುತ್ತಿದ್ದು, ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.
ಐದು ಬಾರಿ ಚಾಂಪಿಯನ್ ಚೆನ್ನೈ ತಂಡದ ನಾಯಕರಾಗಿದ್ದ ಧೋನಿ, ಈ ಸೀಸನ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಎಲ್ಲರೂ ತಿಳಿದಿದ್ದರು. ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿಯ ಹೇಳಿಕೆ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಎಂಎಸ್‌ಡಿ ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ಚೆನ್ನೈ ಪರ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಅನೇಕಾನೇಕ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಉದ್ಭವಸಿದೆ.
ಈ ಎಲ್ಲಾ ಪ್ರಶ್ನೆಗಳಿಗೂ ಮಾ.೨೨ ರಂದು ಉತ್ತರ ಸಿಗಲಿದೆ.





