ಕ್ರೀಡೆ

IPL-2024 ಆರಂಭಕ್ಕೂ ಮುನ್ನಾ ಬಿಗ್‌ ಅಪ್‌ಡೇಟ್‌ ನೀಡಿದ ಎಂಎಸ್‌ ಧೋನಿ

IPLನ 17ನೇ ಆವೃತ್ತಿಯು ಮಾರ್ಚ್ 22 ರಿಂದ ಆರಂಭವಾಗಲಿದೆ. ಈ ಸೀಸನ್​ನ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

ಈ ಸೀಸನ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ತಮ್ಮ ಅಭಿಮಾನಿಗಳಿಗೆ ಬಿಗ್‌ ಅಪ್‌ಡೇಟ್‌ ಕೊಟ್ಟಿದ್ದಾರೆ. ತಮ್ಮ ಫೇಸ್ ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಳ್ಳುವ ಮೂಲಕ ಐಪಿಎಲ್ ವಲಯದಲ್ಲಿ ಎಂಎಸ್‌ಡಿ ಸಂಚಲನ ಮೂಡಿಸಿದ್ದಾರೆ.

ಸೋಷಿಯಲ್‌ ಮೀಡಿಯಾ ದಲ್ಲಿ ಅಷ್ಟಾಗಿ ಆಕ್ಟಿವ್‌ ಇರದ ಧೋನಿ ಐಪಿಎಲ್ ಆರಂಭಕ್ಕೂ ಮುನ್ನ ಫೇಸ್ಬುಕ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಹೊಸ ಸೀಸನ್‌ಗಾಗಿ ಕಾತುರದಿಂದ ಕಾಯುತ್ತಿದ್ದೇನೆ. ಈ ಆವೃತ್ತಿಯಲ್ಲಿ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಸದ್ಯ ಈ ಪೋಸ್ಟ್‌ ಭಾರಿ ಸದ್ದು ಮಾಡುತ್ತಿದ್ದು, ಧೋನಿಯ ಈ ಹೊಸ ಪಾತ್ರ ಯಾವುದು ಎಂಬುದರ ಬಗ್ಗೆ ಊಹಾಪೋಹಗಳು ಶುರುವಾಗಿವೆ.

ಐದು ಬಾರಿ ಚಾಂಪಿಯನ್‌ ಚೆನ್ನೈ ತಂಡದ ನಾಯಕರಾಗಿದ್ದ ಧೋನಿ, ಈ ಸೀಸನ್ನಲ್ಲಿ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಎಲ್ಲರೂ ತಿಳಿದಿದ್ದರು. ಆದರೀಗ ಟೂರ್ನಿ ಆರಂಭಕ್ಕೂ ಮುನ್ನ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದಿರುವ ಧೋನಿಯ ಹೇಳಿಕೆ ಅಭಿಮಾನಿಗಳಿಗೆ ಶಾಕ್‌ ನೀಡಿದೆ.

ಎಂಎಸ್‌ಡಿ ನಾಯಕತ್ವವನ್ನು ತೊರೆಯುತ್ತಾರೆಯೇ ಅಥವಾ ನಿವೃತ್ತಿ ಘೋಷಿಸುತ್ತಾರೆಯೇ ಅಥವಾ ಮಾರ್ಗದರ್ಶಕನ ಪಾತ್ರದಲ್ಲಿ ಚೆನ್ನೈ ಪರ ಕಾಣಿಸಿಕೊಳ್ಳಲಿದ್ದಾರೆಯೇ ಎಂಬ ಅನೇಕಾನೇಕ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಉದ್ಭವಸಿದೆ.
ಈ ಎಲ್ಲಾ ಪ್ರಶ್ನೆಗಳಿಗೂ ಮಾ.೨೨ ರಂದು ಉತ್ತರ ಸಿಗಲಿದೆ.

andolana

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

4 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

5 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

6 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

9 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

9 hours ago