ಕ್ರೀಡೆ

ಹೆಂಡತಿ ಮತ್ತು ಮಗಳೊಂದಿಗೆ ಯುರೋಪ್‌ಗೆ ಹಾರಿದ ಕ್ಯಾಪ್ಟನ್‌ ಕೂಲ್‌

ಟೀಂ ಇಂಡಿಯಾದ ಮಾಜಿ ನಾಯಕ, ಕ್ಯಾಪ್ಟನ್‌ ಕೂಲ್‌ ಎಂಎಸ್‌ಡಿ (ಮಹೇಂದ್ರ ಸಿಂಗ್‌ ಧೋನಿ) ಅವರು ಕುಟುಂಬದೊಂದಿಗೆ ಸಮಯ ಕಳೆಯಲು ವಿದೇಶಕ್ಕೆ ಹಾರಿದ್ದಾರೆ.

ಹೌದು, ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೊಷಿಸಿರುವ ಮಾಸ್ಟರ್‌ ಮೈಂಡ್‌ ಧೋನಿ ಅವರು ಸದ್ಯ ಐಪಿಎಲ್‌ನಿಂದ ಹೊರಬಂದು ಫ್ಯಾಮಿಲಿಯೊಂದಿಗೆ ಸಮಯ ಕಳೆಯುತ್ತಿದ್ದಾರೆ.

2024ರ 17ನೇ ಐಪಿಎಲ್‌ ಸೀಸನ್‌ನಲ್ಲಿ ಸಿಎಸ್‌ಕೆ (ಚೆನ್ನೈಸೂಪರ್‌ ಕಿಂಗ್ಸ್‌) ತಂಡ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. 2023ರ ಸೀಸನ್‌ನ ವಿನ್ನರ್‌ ಆಗಿದ್ದ ಸಿಎಸ್‌ಕೆ ಈ ಬಾರಿ ಕ್ವಾಲಿಫೈಯರ್‌ ಕೂಡಾ ಆಗಲಿಲ್ಲ. ನಿರ್ಣಾಯಕ ಹಂತದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿರುದ್ಧ ಹೀನಾಯವಾಗಿ ಸೋತು ಲೀಗ್‌ನಿಂದ ಹೊರಬಿದ್ದಿತ್ತು.

ಇದೆಲ್ಲದರ ನಡುವೆ ಧೋನಿ ಐಪಿಎಲ್‌ನಿಂದಲೂ ನಿವೃತ್ತಿ ಹೊಂದುತ್ತಾರೆ ಎಂದು ಎಲ್ಲರೂ ಊಹಿಸಿದ್ದರು. ಇದಕ್ಕೆ ಉತ್ತರ ನೀಡಿದ್ದ ಧೋನಿ, ಇನ್ನು 9 ತಿಂಗಳ ಕಾಲಾವಕಾಶ ಇದ್ದು, ಕಾದು ನೋಡಬೇಕಿದೆ ಎಂದು ಹೇಳುವ ಮೂಲಕ ಇನ್ನೊಂದು ಸೀಸನ್‌ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆಯೇ ಅಥವಾ ಇಲ್ಲವೇ ಎಂಬ ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದಾರೆ.

ಇದೆಲ್ಲದರ ನಡುವೆ ಸದ್ಯ ಕುಟುಂಬದೊಂದಿಗೆ ವಿದೇಶಕ್ಕೆ ಹಾರಿರುವ ಎಂಎಸ್‌ ಧೋನಿ ಅಲ್ಲಿ ಸುಂದರ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಸದ್ಯ ಧೋನಿ ಜರ್ಮನಿ, ಇಟಲಿ ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದು, ಅಲ್ಲಿ ಸೌಂದರ್ಯವನ್ನು ಸವಿಯುವ ಮೂಲಕ ಕ್ರಿಕೆಟ್‌ನಿಂದ ಹೊರ ಬಂದಿದ್ದಾರೆ.

ಧೋನಿ ಅವರು ಎಲ್ಲೇ ಸುತ್ತಾಡಿದರು ಆ ಬಗ್ಗೆ ಅವರು ಎಲ್ಲಿಯೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ. ಆದರೆ ಅವರ ಪತ್ನಿ ಸಾಕ್ಷಿ ಧೋನಿ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ಇಟಲಿಯಲ್ಲಿ ಕಳೆಯುತ್ತಿರುವ ಸುಂದರ ಕ್ಷಣಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಂಎಸ್‌ಡಿ ಅಭಿಮಾನಿಗಳು ಸಾಕ್ಷಿಗೆ ಕೃತಜ್ಞನತೆ ತಿಳಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

4 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

5 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

6 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

9 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

9 hours ago