ನವದೆಹಲಿ: ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದ ಟೀಂ ಇಂಡಿಯಾಗೆ ಅಭಿನಂದನೆಗಳ ಮಹಾಪೂರವೆ ಹರಿದು ಬರುತ್ತಿದೆ.
ಗಾಡ್ ಆಫ್ ಕ್ರಿಕೆಟ್ ಸಚಿನ್ ತೆಂಡುಲ್ಕರ್, ವಿರೇಂದ್ರ ಸೆಹ್ವಾಗ್, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಸೇರಿದಂತೆ ಹಲವು ಹಿರಿಯ ಕ್ರಿಕೇಟಿಗರು ಶುಭ ಕೋರಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.
ಇನ್ನು ಇದರಲ್ಲಿ ವಿಶೇಷ ಎಂಬಂತೆ ಎಲ್ಲಾ ಮೂರು ಮಾದರಿಯಲ್ಲಿ ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾದ ಏಕೈಕ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ವರ್ಷಗಳು ಕಳೆದ ಬಳಿಕ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.
ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಶುಭ ಕೋರಿರುವ ಧೋನಿ, ನನ್ನ ಹುಟ್ಟು ಹಬ್ಬಕ್ಕೆ ಉಡುಗೊರೆಯಾಗಿ ವಿಶ್ವಕಪ್ ನೀಡಿದ್ದಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ರೋಹಿತ್ ಅಂಡ್ ಟೀಂ ವಿಶ್ವಕಪ್ ಗೆದ್ದ ಫೋಟೋ ಹಂಚಿಕೊಂಡಿರುವ ಧೋನಿ, “ವರ್ಲ್ಡ್ ಕಪ್ ಚಾಂಪಿಯನ್ಸ್ 2024. ನನ್ನ ಹೃದಯ ಬಡಿತ ಹೆಚ್ಚಾಗಿದೆ, ಶಾಂತವಾಗಿ, ಆತ್ಮ ವಿಶ್ವಾಸವನ್ನು ಹೊಂದಿದ್ದಕ್ಕಾಗಿ ಮತ್ತು ನೀವು ಏನು ಮಾಡಿದ್ದೀರಿ ಎಂಬುದನ್ನು ಚೆನ್ನಾಗಿ ಮಾಡಿದ್ದೀರಿ. ಮನೆಗೆ ಹಿಂದಿರುಗಿದ ಎಲ್ಲಾ ಭಾರತೀಯರಿಂದ ಮತ್ತು ಪ್ರಪಂಚದ ಎಲ್ಲೆಡೆಯಿಂದ ವಿಶ್ವಕಪ್ ಅನ್ನು ಮನೆಗೆ ತಂದಿದ್ದಕ್ಕಾಗಿ ನಿಮಗೆ ದೊಡ್ಡ ಧನ್ಯವಾದಗಳು. ನಿಮ್ಮ ಅಮೂಲ್ಯ ಹುಟ್ಟುಹಬ್ಬದ ಉಡುಗೊರೆಗಾಗಿ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಇನ್ನು ಈ ಪೋಸ್ಟ್ ಎಲ್ಲಡೆ ವೈರಲ್ ಆಗಿದ್ದು, ಅಭಿಮಾನಿಗಳು ಧೋನಿ ಅವರು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
https://www.instagram.com/p/C8z9ctJSGqU/?utm_source=ig_web_copy_link
ಸಚಿನ್ ಟ್ವೀಟ್: ವೆಸ್ಟ್ ಇಂಡೀಸ್‌ನಲ್ಲಿ ಭಾರತೀಯ ಕ್ರಿಕೆಟ್‌ಗೆ ಜೀವನವು ಪೂರ್ಣ ವೃತ್ತವಾಗಿದೆ. 2007ರ ODI ವಿಶ್ವಕಪ್‌ನಲ್ಲಿನ ನಮ್ಮ ತಗ್ಗುಗಳಿಂದ ಹಿಡಿದು 2024ರಲ್ಲಿ T20WC ಗೆಲ್ಲುವವರೆಗೆ ಕ್ರಿಕೆಟ್ ಶಕ್ತಿಯಾಗುವುದರವರೆಗೆ. 2011ರ ವಿಶ್ವಕಪ್ ಗೆಲುವಿನಿಂದ ವಂಚಿತರಾದ ನನ್ನ ಸ್ನೇಹಿತ ರಾಹುಲ್ ದ್ರಾವಿಡ್‌ಗೆ ತುಂಬಾ ಸಂತೋಷವಾಗಿದೆ ಆದರೆ ಈ T20 ವಿಶ್ವಕಪ್ ಗೆಲುವಿಗೆ ಅವರ ಕೊಡುಗೆ ಅಪಾರವಾಗಿದೆ.
ರೋಹಿತ್ ಶರ್ಮಾ ಓರ್ವ ಅದ್ಭುತ ನಾಯಕತ್ವ! 2023ರ ODI ವಿಶ್ವಕಪ್‌ನ ಸೋಲನ್ನು ಹಿಂದೆ ಹಾಕುವುದು ಮತ್ತು ನಮ್ಮ ಎಲ್ಲಾ ಆಟಗಾರರನ್ನು T20 ವಿಶ್ವಕಪ್‌ಗೆ ಪ್ರೇರೇಪಿಸುವಂತೆ ಮಾಡಿರುವುದು ನಿಜಕ್ಕೂ ಶ್ಲಾಘನೀಯ.
ಜಸ್ಪ್ರೀತ್ ಬುಮ್ರ, ಸರಣಿ ಶ್ರೇಷ್ಠ ಆಟಗಾರ ಪ್ರಶಸ್ತಿ ಜೊತೆಗೆ ವಿರಾಟ್ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಇಬ್ಬರೂ ಅರ್ಹರು. ಇದೊಂದು ಒಟ್ಟು ತಂಡದ ಪ್ರಯತ್ನವಾಗಿದ್ದು, ಎಲ್ಲಾ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ, ಮತ್ತು ಹೃತ್ಪೂರ್ವಕ ಅಭಿನಂದನೆಗಳು.
https://x.com/sachin_rt/status/1807143208067162270
ವಿರೇಂದ್ರ ಸೆಹ್ವಾಗ್ ಟ್ವೀಟ್: ಹೌದು ! ಕಾಯುವಿಕೆ ಕೊನೆಗೊಳ್ಳುತ್ತದೆ. ಇದನ್ನು ಗೆಲ್ಲಲು ಏನು ಪುನರಾಗಮನ. ನಾವು 13 ವರ್ಷಗಳ ನಂತರ ವಿಶ್ವಕಪ್ ಗೆದ್ದಿದ್ದೇವೆ ಮತ್ತು 17 ವರ್ಷಗಳ ನಂತರ ಟಿ20 ವಿಶ್ವಕಪ್ ಗೆದ್ದಿದ್ದೇವೆ. ಐಪಿಎಲ್ ಆರಂಭವಾದ ನಂತರ ನಮಗೆ ಮೊದಲ ಟಿ20 ವಿಶ್ವಕಪ್ ಗೆದ್ದಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…