ಮುಂಬೈ: ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ಗಳ ಅಂತರದಿಂದ ಚೆನ್ನೈ ಸೂಪರ್‌ಕಿಂಗ್ಸ್ ತಂಡವನ್ನು ಮಣಿಸಿತು.
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಮುಂಬೈ 15.4 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು 177 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಚೆನ್ನೈ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚೆನ್ನೈಗೆ ಆರಂಭಿಕ ಆಘಾತ ಎದುರಾಯಿತು. ರಚಿನ್ 5(9), ರಸೀದ್ 19(20) ರನ್ ಗಳಿಸಿ ಔಟಾದರು.
ಬಳಿಕ ಬಂದ ಆಯೂಷ್ 32(15), ಶಿವಂ ದುಬೆ 50(32) ರನ್, ನಾಯಕ ಧೋನಿ 4(6) ರನ್ ಗಳಿಸಿ ಔಟಾದರು. ಮತ್ತೊಂದೆಡೆ ನಾಟ್‌ಔಟ್ ಆಗಿ ಬ್ಯಾಟ್ ಬೀಸಿದ ರವೀಂದ್ರ ಜೆಡೇಜಾ 35 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಿತ 53 ರನ್ ಬಾರಿಸಿದರು. ಓವರ್‌ಟನ್ 4(3) ರನ್ ಗಳಿಸಿ ನಾಟ್‌ಔಟ್ ಆಗಿ ಉಳಿದರು.
ಮುಂಬೈ ಪರ ಬುಮ್ರಾ ಎರಡು, ಚಾಹರ್, ಅಶ್ವಾನಿ ಕುಮಾರ್ ಮತ್ತು ಸ್ಯಾಂಟ್ನರ್ ತಲಾ ಒಂದೊಂದು ವಿಕೆಟ್ ಪಡೆದರು.
ಮುಂಬೈ ಇನ್ನಿಂಗ್ಸ್: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟ ನೀಡುವ ಮೂಲಕ ತಂಡದ ಗೆಲುವಿಗೆ ಸಹಕರಿಸಿದರು.
ಈ ಜೋಡಿ ನಾಟ್ ಔಟ್ ಆಗಿ ಪಂದ್ಯವನ್ನು ಗೆದ್ದುಕೊಟ್ಟರು. ರೋಹಿತ್ 45 ಎಸತ, 4 ಬೌಂಡರಿ ಮತ್ತು 6 ಸಿಕ್ಸರ್ ಸಹಿತ 76 ರನ್ ಬಾರಿಸಿದರೇ, ಸೂರ್ಯ 30 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸರ್ ಸಹಿತ 68 ರನ್ ಚಚ್ಚಿದರು. ಆರಂಭಿಕ ಬ್ಯಾಟರ್ ರಿಕೆಲ್ಟನ್ 24(19) ರನ್ ಗಳಿಸಿ ಔಟಾದರು.
ಸಿಎಸ್‌ಕೆ ಪರ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದರು.





