ಕ್ರೀಡೆ

ಚೆನ್ನೈ ತಂಡವನ್ನು 9 ವಿಕೆಟ್‌ಗಳ ಅಂತರದಲ್ಲಿ ಮಣಿಸಿದ ಮುಂಬೈ

ಮುಂಬೈ: ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮುಂಬೈ ಇಂಡಿಯನ್ಸ್‌ ತಂಡ 9 ವಿಕೆಟ್ಗಳ ಅಂತರದಿಂದ ಚೆನ್ನೈ ಸೂಪರ್‌ಕಿಂಗ್ಸ್‌ ತಂಡವನ್ನು ಮಣಿಸಿತು.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 176 ರನ್‌ ಗಳಿಸಿತು. ಈ ಮೊತ್ತ ಬೆನ್ನತ್ತಿದ ಮುಂಬೈ 15.4 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು 177 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

ಚೆನ್ನೈ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಚೆನ್ನೈಗೆ ಆರಂಭಿಕ ಆಘಾತ ಎದುರಾಯಿತು. ರಚಿನ್‌ 5(9), ರಸೀದ್‌ 19(20) ರನ್‌ ಗಳಿಸಿ ಔಟಾದರು.

ಬಳಿಕ ಬಂದ ಆಯೂಷ್‌ 32(15), ಶಿವಂ ದುಬೆ 50(32) ರನ್‌, ನಾಯಕ ಧೋನಿ 4(6) ರನ್‌ ಗಳಿಸಿ ಔಟಾದರು. ಮತ್ತೊಂದೆಡೆ ನಾಟ್‌ಔಟ್‌ ಆಗಿ ಬ್ಯಾಟ್‌ ಬೀಸಿದ ರವೀಂದ್ರ ಜೆಡೇಜಾ 35 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್‌ ಸಹಿತ 53 ರನ್‌ ಬಾರಿಸಿದರು. ಓವರ್‌ಟನ್‌ 4(3) ರನ್‌ ಗಳಿಸಿ ನಾಟ್‌ಔಟ್‌ ಆಗಿ ಉಳಿದರು.

ಮುಂಬೈ ಪರ ಬುಮ್ರಾ ಎರಡು, ಚಾಹರ್‌, ಅಶ್ವಾನಿ ಕುಮಾರ್‌ ಮತ್ತು ಸ್ಯಾಂಟ್ನರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಮುಂಬೈ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಮಾಜಿ ನಾಯಕ ರೋಹಿತ್‌ ಶರ್ಮಾ ಹಾಗೂ ಸ್ಟಾರ್‌ ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಉತ್ತಮ ಜೊತೆಯಾಟ ನೀಡುವ ಮೂಲಕ ತಂಡದ ಗೆಲುವಿಗೆ ಸಹಕರಿಸಿದರು.

ಈ ಜೋಡಿ ನಾಟ್‌ ಔಟ್‌ ಆಗಿ ಪಂದ್ಯವನ್ನು ಗೆದ್ದುಕೊಟ್ಟರು. ರೋಹಿತ್‌ 45 ಎಸತ, 4 ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ 76 ರನ್‌ ಬಾರಿಸಿದರೇ, ಸೂರ್ಯ 30 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸರ್‌ ಸಹಿತ 68 ರನ್‌ ಚಚ್ಚಿದರು. ಆರಂಭಿಕ ಬ್ಯಾಟರ್‌ ರಿಕೆಲ್ಟನ್‌ 24(19) ರನ್‌ ಗಳಿಸಿ ಔಟಾದರು.

ಸಿಎಸ್‌ಕೆ ಪರ ರವೀಂದ್ರ ಜಡೇಜಾ ಒಂದು ವಿಕೆಟ್‌ ಪಡೆದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago