ಮುಂಬೈ: ನವೆಂಬರ್.23ರಂದು ನಡೆಯಲಿರುವ ಟಿ20 ಕ್ರಿಕೆಟ್ ಟೂರ್ನಿಗೆ ಮುಂಬೈ ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ಮುಂಬೈ ಕ್ರಿಕೆಟ್ ಸಂಸ್ಥೆ ನೇಮಕ ಮಾಡಲಾಗಿದೆ.
2023ರ ಏಕದಿನ ವಿಶ್ವಕಪ್ ನಂತರ ಅವರು ಗಾಯದ ಸಮಸ್ಯೆಯಿಂದ ಭಾರತ ಕ್ರಿಕೆಟ್ ತಂಡದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಈಗ ಗಾಯದ ಸಮಸ್ಯೆಯಿಂದ ಹೊರಬಂದಿರುವ ಅವರು ಭಾರತ ತಂಡದಲ್ಲಿ ಮತ್ತೆ ತಮ್ಮ ಕ್ರಿಕೆಟ್ ಇನ್ನಿಂಗ್ಸ್ ಆರಂಭಿಸುವ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.
ಡೊಮೆಸ್ಟಿಕ್ ಟೂರ್ನಿಗಳಲ್ಲಿ ಅತ್ಯುತ್ತಮ ಲಯದಲ್ಲಿರುವ ಶ್ರೇಯಸ್ ಅಯ್ಯರ್ ರಣಜಿ ಟೂರ್ನಿಯಲ್ಲಿ ಮುಂಬೈ ತಂಡದ ಪರವಾಗಿ 452 ರನ್ ಗಳಿಸಿದರು. ಒಡಿಶಾ ತಂಡದ ಎದುರು 233 ರನ್ ಗಳಿಸಿದ್ದರು.
ಇದೇ ತಿಂಗಳು ನಡೆಯುವ ಸೈಯದ್ ಮುಷ್ತಾಕ್ ಟಿ20 ಟೂರ್ನಿಯಲ್ಲಿ ಮುಂಬೈ ತಂಡವನ್ನು ಮುನ್ನಡೆಸುವ ಜೊತೆಗೆ ವೈಯುಕ್ತಿಕವಾಗಿಯೂ ತಮ್ಮ ಸಾಮರ್ಥ್ಯ ತೋರಿಸಿ ಭಾರತ ತಂಡದ ಜೆರ್ಸಿ ತೊಡಲು ಸಿದ್ದವಾಗಿದ್ದಾರೆ.
ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಅಜಿಂಕ್ಯ ರಹಾನೆ ಕೂಡ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…