ಕ್ರೀಡೆ

ಮಹಾರಾಜ ಟ್ರೋಫಿ ಎತ್ತಿಹಿಡಿದ ಮೈಸೂರು ವಾರಿಯರ್ಸ್‌

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ ಫೈನಲ್‌ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌ ತಂಡ ಬೆಂಗಳೂರು ಬ್ಲಾಸ್ಟರ್ಸ್‌ ವಿರುದ್ಧ 45 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಚಾಂಪಿಯನ್‌ ಆಗಿ ಹೊರಹೊಮ್ಮಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್‌ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಮೈಸೂರು ವಾರಿಯರ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೈಸೂರು ವಾರಿಯರ್ಸ್‌ ಎಸ್‌ಯು ಕಾರ್ತಿಕ್‌, ನಾಯಕ ಕರುಣ್‌ ನಾಯರ್‌ ಹಾಗೂ ಮನೋಜ್‌ ಭಾಂಡಗೆ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 207 ರನ್‌ ಕಲೆಹಾಕಿ ಬೆಂಗಳೂರು ಬ್ಲಾಸ್ಟರ್ಸ್‌ ತಂಡಕ್ಕೆ ಗೆಲ್ಲಲು 208 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಬೆಂಗಳೂರು ಬ್ಲಾಸ್ಟರ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 162 ರನ್‌ ಕಲೆಹಾಕಿತು.

ಮೈಸೂರು ವಾರಿಯರ್ಸ್‌ ಇನ್ನಿಂಗ್ಸ್‌: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಎಸ್‌ಯು ಕಾರ್ತಿಕ್‌ 44 ಎಸೆತಗಳಲ್ಲಿ 71 ರನ್‌ ಗಳಿಸಿದರೆ, ಕಾರ್ತಿಕ್‌ ಸಿಎ ಕೇವಲ 3 ರನ್‌ಗಳಿಗೆ ವಿಕೆಟ್‌ ಒಪ್ಪಿಸಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಉತ್ತಮ ಆಟವನ್ನಾಡಿದ ನಾಯಕ ಕರುಣ್‌ ನಾಯರ್‌ 45 ಎಸೆತಗಳಲ್ಲಿ 66 ರನ್ ಗಳಿಸಿದರೆ, ಹರ್ಷಿಲ್‌ ಧರ್ಮನಿ 6 ರನ್‌ ಕಲೆ ಹಾಕಿದರು. ಇನ್ನಿಂಗ್ಸ್‌ನ ಕೊನೆಯಲ್ಲಿ ಅಬ್ಬರಿಸಿದ ಮನೋಜ್‌ ಭಾಂಡಗೆ 13 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ ನೆರವಿನಿಂದ ಅಜೇಯ 44 ರನ್‌ ಬಾರಿಸಿದರು ಮತ್ತು 6 ಎಸೆತಗಳಲ್ಲಿ 7 ರನ್‌ ಕಲೆಹಾಕಿದ ಜಗದೀಶ ಸುಚಿತ್‌ ಅಜೇಯರಾಗಿ ಉಳಿದರು.

ಬೆಂಗಳೂರು ಬ್ಲಾಸ್ಟರ್ಸ್‌ ಪರ ನವೀನ್‌ ಎಂಜಿ ಎರಡು ವಿಕೆಟ್‌, ಕ್ರಾಂತಿ ಕುಮಾರ್‌ ಮತ್ತು ಶುಭಾಂಗ್ ಹೆಗ್ಡೆ ತಲಾ ಒಂದೊಂದು ವಿಕೆಟ್‌ ಪಡೆದರು.

ಬೆಂಗಳೂರು ಬ್ಲಾಸ್ಟರ್ಸ್‌ ಇನ್ನಿಂಗ್ಸ್:‌ ಮೈಸೂರು ವಾರಿಯರ್ಸ್‌ ನೀಡಿದ ಕಠಿಣ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಬೆಂಗಳೂರು ಬ್ಲಾಸ್ಟರ್ಸ್‌ ಎದುರಾಳಿ ಪಡೆಯ ಬೌಲಿಂಗ್‌ ದಾಳಿಗೆ ಪರದಾಡಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್‌ ಅಗರ್ವಾಲ್‌ ಕೇವಲ 6 ರನ್‌ಗಳಿಗೆ ವಿಕೆಟ್‌ ಒಪ್ಪಿಸಿದರೆ, ಎಲ್‌ಆರ್‌ ಚೇತನ್‌ ತಂಡದ ವಿಕೆಟ್‌ಗಳು ಸಾಲು ಸಾಲಾಗಿ ಉರುಳುತ್ತಿದ್ದ ಸಂದರ್ಭದಲ್ಲಿ 51 (32) ರನ್‌ ಗಳಿಸಿ ಜವಾಬ್ದಾರಿಯುತ ಆಟವನ್ನಾಡಿದರು. ಇನ್ನುಳಿದಂತೆ ಭುವನ್‌ ರಾಜು 1, ಶಿವಕುಮಾರ್‌ ರಕ್ಷಿತ್‌ 5, ಶುಭಾಂಗ್‌ ಹೆಗ್ಡೆ 5, ಸೂರಜ್‌ ಅಹುಜಾ 8, ಅನಿರುದ್ಧಾ ಜೋಷಿ 18, ನವೀನ್‌ ಎಂಜಿ 17, ಕ್ರಾಂತಿ ಕುಮಾರ್‌ ಅಜೇಯ 39 (21) ರನ್‌ ಮತ್ತು ಮೊಹ್ಸಿನ್‌ ಖಾನ್‌ ಅಜೇಯ 4 ರನ್‌ ಕಲೆಹಾಕಿದರು.

ಮೈಸೂರು ವಾರಿಯರ್ಸ್‌ ಪರ ವಿದ್ಯಾಧರ್‌ ಪಾಟೀಲ್‌ 3 ವಿಕೆಟ್‌, ಕೃಷ್ಣಪ್ಪ ಗೌತಮ್ 2 ವಿಕೆಟ್‌, ಕೋದಂಡ ಅಜಿತ್ ಕಾರ್ತಿಕ್‌, ಧನುಷ್‌ ಗೌಡ ಹಾಗೂ ದೀಪಕ್‌ ದೇವಾಡಿಗ ತಲಾ ಒಂದೊಂದು ವಿಕೆಟ್‌ ಪಡೆದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

3 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

4 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

6 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

6 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

8 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

8 hours ago