ಜ್ಯೂರಿಚ್: ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್‌ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದಿರುವ ಮೊದಲ ಭಾರತೀಯ ಎನಿಸಿಕೊಂಡರು.
ಚೋಪ್ರಾ ಅವರು ಫೌಲ್‌ನೊಂದಿಗೆ ಆಟ ಪ್ರಾರಂಭಿಸಿದ್ದರು. ಆದರೆ ತಮ್ಮ ಎರಡನೇ ಪ್ರಯತ್ನದಲ್ಲಿ 88.44 ಮೀ ದೂರ ಜಾವೆಲಿನ್ ಎಸೆದು ಅಗ್ರಸ್ಥಾನಕ್ಕೆ ಜಿಗಿದರು. ಇದು ಅವರ ವೃತ್ತಿಜೀವನದ ಅತ್ಯಂತ ದೊಡ್ಡ ಗೆಲುವುಗಳಲ್ಲಿ ಒಂದು. ತಮ್ಮ ಮುಂದಿನ ನಾಲ್ಕು ಎಸೆತಗಳಲ್ಲಿ 88.00ಮೀ, 86.11ಮೀ, 87.00ಮೀ ಮತ್ತು 83.60ಮೀ ಎಸೆದು ಚಾಂಪಿಯನ್ ಆಗಿ ಹೊರ ಹೊಮ್ಮಿದರು.
ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಅವರು ತಮ್ಮ ನಾಲ್ಕನೇ ಪ್ರಯತ್ನದಲ್ಲಿ 86.94 ಮೀ ಎಸೆತದೊಂದಿಗೆ ಎರಡನೇ ಸ್ಥಾನ ಪಡೆದರು. ಜರ್ಮನಿಯ ಜೂಲಿಯನ್ ವೆಬರ್ ಅತ್ಯುತ್ತಮ 83.73 ಮೀಟರ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.
ನೀರಜ್ ಚೋಪ್ರಾ ಅವರೀಗ ಒಲಿಂಪಿಕ್ ಚಿನ್ನದ ಪದಕ, ವಿಶ್ವ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ಮತ್ತು ಇದೀಗ ಡೈಮಂಡ್ ಲೀಗ್ ಚಾಂಪಿಯನ್ ಆಗಿ ಶ್ರೇಷ್ಠ ಸಾಧಕನಾಗಿದ್ದಾರೆ
.
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್…
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…