ಕ್ರೀಡೆ

ಮತ್ತೊಮ್ಮೆ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ

ಜ್ಯೂರಿಚ್: ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್‌ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದಿರುವ ಮೊದಲ ಭಾರತೀಯ ಎನಿಸಿಕೊಂಡರು.

ಚೋಪ್ರಾ ಅವರು ಫೌಲ್‌ನೊಂದಿಗೆ ಆಟ ಪ್ರಾರಂಭಿಸಿದ್ದರು. ಆದರೆ ತಮ್ಮ ಎರಡನೇ ಪ್ರಯತ್ನದಲ್ಲಿ 88.44 ಮೀ ದೂರ ಜಾವೆಲಿನ್ ಎಸೆದು ಅಗ್ರಸ್ಥಾನಕ್ಕೆ ಜಿಗಿದರು. ಇದು ಅವರ ವೃತ್ತಿಜೀವನದ ಅತ್ಯಂತ ದೊಡ್ಡ ಗೆಲುವುಗಳಲ್ಲಿ ಒಂದು. ತಮ್ಮ ಮುಂದಿನ ನಾಲ್ಕು ಎಸೆತಗಳಲ್ಲಿ 88.00ಮೀ, 86.11ಮೀ, 87.00ಮೀ ಮತ್ತು 83.60ಮೀ ಎಸೆದು ಚಾಂಪಿಯನ್​ ಆಗಿ ಹೊರ ಹೊಮ್ಮಿದರು.

ಒಲಿಂಪಿಕ್ ಬೆಳ್ಳಿ ಪದಕ ವಿಜೇತ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಅವರು ತಮ್ಮ ನಾಲ್ಕನೇ ಪ್ರಯತ್ನದಲ್ಲಿ 86.94 ಮೀ ಎಸೆತದೊಂದಿಗೆ ಎರಡನೇ ಸ್ಥಾನ ಪಡೆದರು. ಜರ್ಮನಿಯ ಜೂಲಿಯನ್ ವೆಬರ್ ಅತ್ಯುತ್ತಮ 83.73 ಮೀಟರ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು.

ನೀರಜ್ ಚೋಪ್ರಾ ಅವರೀಗ ಒಲಿಂಪಿಕ್ ಚಿನ್ನದ ಪದಕ, ವಿಶ್ವ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ಮತ್ತು ಇದೀಗ ಡೈಮಂಡ್ ಲೀಗ್ ಚಾಂಪಿಯನ್ ಆಗಿ ಶ್ರೇಷ್ಠ ಸಾಧಕನಾಗಿದ್ದಾರೆ

 

.

andolanait

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

6 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

8 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago