ಕ್ರೀಡೆ

Paris Olympics 2024: ಫೈನಲ್ಸ್‌ಗೆ ಗುರಿಯಿಟ್ಟ ನೀರಜ್‌ ಚೋಪ್ರಾ

ಪ್ಯಾರಿಸ್‌: ಇಂದು ನಡೆದ ಪ್ಯಾರಿಸ್‌ ಓಲಂಪಿಕ್ಸ್‌ನ ಜಾವೆಲಿನ್‌ ಥ್ರೋ ವಿಭಾಗದಲ್ಲಿ ಭಾರತ ಪರವಾಗಿ ಭಾಗವಹಿಸಿದ್ದ ನೀರಜ್‌ ಚೋಪ್ರಾ, ತಮಗೆ ಸಿಕ್ಕ ಮೊದಲ ಅವಕಾಶದಲ್ಲೇ 89.34 ಮೀ ದೂರಕ್ಕೆ ಎಸೆಯುವ ಮೂಲಕ ನೇರವಾಗಿ ಫೈನಲ್ಸ್‌ ಪ್ರವೇಶಿಸಿದರು.

ಭಾರತದ ಚಿನ್ನದ ತಾರೆ ನೀರಜ್‌ ಚೋಪ್ರಾ ಅವರು ಮೊದಲ ಪ್ರಯತ್ನದಲ್ಲೇ ಫೈನಲ್ಸ್‌ ತಲುಪುವ ಮೂಲಕ ನೀರಜ್‌ ತಮ್ಮ ಎರಡನೇ ಒಲಂಪಿಕ್ಸ್‌ ಫೈನಲ್ಸ್‌ಗೆ ಕಾಲಿಟ್ಟಿದ್ದಾರೆ.

ಇದೇ ವಿಭಾಗದಲ್ಲಿ ಭಾಗವಹಿಸಿದ್ದ ಮತ್ತೊಬ್ಬ ಭಾರತೀಯ ಕಿಶೋರ್‌ ಜೆನಾ 80.93 ಮೀ. ಎಸೆದು ಫೈನಲ್ಸ್‌ ತಲುಪುವಲ್ಲಿ ವಿಫಲರಾಗಿ ನಿರಾಸೆ ಮೂಡಿಸಿದರು. ಇತ್ತ ಪಾಕಿಸ್ತಾನದ ಹರ್ಷದ್‌ ನದೀಮ್‌ 86.59 ಮೀ ಜಾವೆಲಿನ್‌ ಎಸೆದು ಫೈನಲ್ಸ್‌ ಪ್ರವೇಶಿಸಿದ್ದಾರೆ.

ನೀರಜ್‌ ಚೋಪ್ರಾ ಅವರ ಫೈನಲ್ಸ್‌ ಹಣಾಹಣೆ ಇದೇ ಆಗಸ್ಟ್‌ 8ರಂದು ರಾತ್ರಿ 11.55ಕ್ಕೆ ನಡೆಯಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

3 hours ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

3 hours ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

3 hours ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

3 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

3 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

11 hours ago